
ದಕ್ಷಿಣ ಕನ್ನಡ (ಅ. 26): ಈ ವಾರದ ವೀಕೆಂಡ್'ಗೆ ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥನ ಸನ್ನಿಧಿಗೆ ಭೇಟಿ ನೀಡುವ ಪ್ಲಾನ್ ಮಾಡಿದ್ದೀರಾ? ಹಾಗಾದ್ರೆ ಕೂಡಲೇ ಪ್ಲಾನ್ ಬದಲಾಯಿಸಿಕೊಳ್ಳಿ, ಯಾಕಂದರೆ ಶನಿವಾರ ಮಧ್ಯಾಹ್ನದಿಂದ ಭಾನುವಾರ ಮಧ್ಯಾಹ್ನದವರೆಗೆ ಭಕ್ತರಿಗೆ ಮಂಜುನಾಥಸ್ವಾಮಿ ದರ್ಶನಕ್ಕೆ ಅವಕಾಶ ನಿರ್ಬಂಧಿಸಲಾಗಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅಕ್ಟೋಬರ್ 29 ರ ಭಾನುವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ. ಮೋದಿಯ ಭದ್ರತಾ ದೃಷ್ಟಿಯಿಂದ 28 ರ ಶನಿವಾರ ಮಧ್ಯಾಹ್ನ 2 ಗಂಟೆಯಿಂದ 29ರ ಭಾನುವಾರ ಮಧ್ಯಾಹ್ನ 2 ಗಂಟೆಯವರೆಗೆ ಸಾರ್ವಜನಿಕ ಭಕ್ತಾದಿಗಳಿಗೆ ದರ್ಶನ ಪಡೆಯಲು ನಿರ್ಬಂಧಿಸಲಾಗಿದೆ. ಈ ಸಂಬಂಧ ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದ್ದು, ಪ್ರಧಾನಿಗಳ ಭೇಟಿಯಿಂದಾಗಿ ಒಂದು ದಿನದ ಮಟ್ಟಿಗೆ ಮಂಜುನಾಥಸ್ವಾಮಿ ದರ್ಶನಕ್ಕೆ ನಿರ್ಬಂಧ ವಿಧಿಸಿದ್ದೇವೆ. ಭದ್ರತೆಯ ಜೊತೆಗೆ ವಾಹನ ನಿಲುಗಡೆಗೂ ತೊಂದರೆಯಾಗಲಿದೆ ಹಾಗಾಗಿ ಭಕ್ತಾದಿಗಳು ಸಹಕರಿಸಬೇಕಾಗಿ ಮನವಿ ಮಾಡಿದೆ. ಆ 24 ಗಂಟೆಗಳ ಸಮಯದ ಬದಲು ಬೇರೆ ಸಮಯದಲ್ಲಿ ದರ್ಶನಕ್ಕೆ ವ್ಯವಸ್ಥೆ ಮಾಡಿಕೊಳ್ಳಿ ಎಂದು ಸಲಹೆ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.