ಪ್ರತಿಷ್ಠಿತ ಶೋ ಗೆ ಚಾಲನೆ ನೀಡಲು ರಾಜ್ಯಕ್ಕೆ ಆಗಮಿಸಲಿದ್ದಾರೆ ಮೋದಿ

Published : Dec 08, 2018, 07:40 AM IST
ಪ್ರತಿಷ್ಠಿತ ಶೋ ಗೆ ಚಾಲನೆ ನೀಡಲು ರಾಜ್ಯಕ್ಕೆ ಆಗಮಿಸಲಿದ್ದಾರೆ ಮೋದಿ

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಪ್ರತಿಷ್ಠಿತ ಶೋ ಒಂದಕ್ಕೆ ಚಾಲನೆ ನೀಡಲು ರಾಜ್ಯಕ್ಕೆ ಆಗಮಿಸಲಿದ್ದಾರೆ. 2019ನೇ ಸಾಲಿನ ಏರೋ ಇಂಡಿಯಾ ಶೋ ಉದ್ಘಾಟನೆಗಾಗಿ ಆಗಮಿಸಲಿದ್ದಾರೆ. 

ನವದೆಹಲಿ: ಬೆಂಗಳೂರಿನ ಪ್ರತಿಷ್ಠೆ ಎಂದೇ ಹೇಳಲಾಗಿರುವ 2019ನೇ ಸಾಲಿನ ಏರೋ ಇಂಡಿಯಾ ಶೋ ಫೆಬ್ರವರಿ 20-24ರವರೆಗೂ ನಡೆಯಲಿದೆ. ಏರೋ ಇಂಡಿಯಾ ಪ್ರದರ್ಶನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡುವ ಸಾಧ್ಯತೆಯಿದೆ ಎಂದು ರಕ್ಷಣಾ ಸಚಿವಾಲಯದ ವಕ್ತಾರ ಕರ್ನಲ್‌ ಅಮನ್‌ ಆನಂದ್‌ ಅವರು ಹೇಳಿದ್ದಾರೆ. ಅಲ್ಲದೆ, ಯುದ್ಧ ವಿಮಾನಗಳ ಪ್ರದರ್ಶನದಲ್ಲಿ ಅಮೆರಿಕದಲ್ಲಿರುವ ಭಾರತೀಯ ಮೂಲದ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ ಅವರು ಪಾಲ್ಗೊಳ್ಳುತ್ತಿದ್ದಾರೆ.

ಈ ಬಗ್ಗೆ ಶುಕ್ರವಾರ ಮಾತನಾಡಿದ ರಕ್ಷಣಾ ಸಚಿವಾಲಯದ ವಕ್ತಾರ ಕರ್ನಲ್‌ ಅಮನ್‌ ಆನಂದ್‌ ಅವರು, ‘ಪ್ರತೀ ಎರಡು ವರ್ಷಗಳಿಗೊಮ್ಮೆ ನಡೆಯಲಿರುವ ಏರೋ ಪ್ರದರ್ಶನದ ಹಾಲಿ ವರ್ಷದ ಶೋನ ಎರಡನೇ ದಿನ ಸ್ಟಾರ್ಟ್‌ ಅಪ್‌ ಡೇ ಏರ್ಪಡಿಸಲಾಗುತ್ತದೆ. 

ಅಲ್ಲದೆ, ಶೋನ ನಾಲ್ಕನೇ ದಿನ ಮಹಿಳೆಯರ ದಿನಾಚರಣೆ ಆಚರಣೆ ಹಮ್ಮಿಕೊಳ್ಳಲಾಗಿದ್ದು, ಅಂದಿನ ದಿನ ಅಮೆರಿಕದಲ್ಲಿರುವ ಭಾರತದ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ ಅವರು ಆಗಮಿಸಲಿದ್ದಾರೆ. ಅಲ್ಲದೆ, ವಿಮಾನಯಾನ ಕ್ಷೇತ್ರದಲ್ಲಿ ಸಾಧನೆಗೈದ ಹಲವು ಮಹಿಳೆಯರು ಪಾಲ್ಗೊಳ್ಳಲಿದ್ದಾರೆ’ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

KSRTC ಬಸ್ ಡ್ರೈವರ್ ಹಾರ್ನ್ ಮಾಡಿದ್ದೇ ತಪ್ಪಾಯ್ತಂತೆ; ಊರಿನ ಜನರೆಲ್ಲಾ ಸೇರಿಕೊಂಡು ಧರ್ಮದೇಟು ಕೊಟ್ಟರು!
ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್‌ಗೆ ಮಧ್ಯಂತರ ಜಾಮೀನು ಮಂಜೂರು!