
ನವದೆಹಲಿ[ಮೇ.30]: ಮೋದಿ ಮೇ. 30 ಸಂಜೆ 7 ಗಂಟೆಗೆ ಎರಡನೇ ಅವಧಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಇದಕ್ಕೂ ಮುನ್ನ ರಾಜ್‍ಘಾಟ್‍ನ ಮಹಾತ್ಮಾ ಗಾಂಧಿ ಹಾಗೂ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸಮಾಧಿ ಬಳಿ ತೆರಳಿ ಮಹಾನ್ ಚೇತನಗಳಿಗೆ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ಹಲವು ಬಿಜೆಪಿ ನಾಯಕರು ಹಾಗೂ ಕೆಲ ಸಂಸದರು ಹಾಜರಿದ್ದರು.
ನಂತರ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಸ್ವಾತಂತ್ರ್ಯ ನಂತರ ಹುತಾತ್ಮರಾದ ಯೋಧರಿಗೆ ನರೇಂದ್ರ ಮೋದಿ ಪುಷ್ಪ ನಮನ ಸಲ್ಲಿಸಿ ಗೌರವ ಸಮರ್ಪಿಸಿದರು. ನರೇಂದ್ರ ಮೋದಿ ಜೊತೆ ನಿರ್ಗಮಿತ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಸುನಿಲ್ ಲಂಬಾ ಮತ್ತು ವಾಯುಪಡೆಯ ಉಪ ಮುಖ್ಯಸ್ಥ ಏರ್ ಮಾರ್ಷಲ್ ಆರ್.ಕೆ.ಎಸ್.ಬದೌರಿಯಾ ಹಾಜರಿದ್ದರು.
ಅರವತ್ತೆಂಟು ವರ್ಷದ ನರೇಂದ್ರ ಮೋದಿಯವರು ಎರಡನೇ ಬಾರಿಗೆ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದು, ದೇಶ-ವಿದೇಶಗಳ ಗಣ್ಯಾತಿಗಣ್ಯರು ಭಾಗವಹಿಸಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.