
ಬೆಂಗಳೂರು (ಜ.31): ಬಿಜೆಪಿಯ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭವು ಫೆ.4 ರಂದು ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ಈ ಕಾರ್ಯಕ್ರಮದಲ್ಲಿ ಸುಮಾರು 4 ಲಕ್ಷ ಕಾರ್ಯಕರ್ತರನ್ನು ಕರೆತರುವ ಪ್ರಯತ್ನ ಪಕ್ಷದಿಂದ ನಡೆದಿದೆ.
ಅರಮನೆ ಮೈದಾನದಲ್ಲಿ ಈ ಸಮಾರಂಭಕ್ಕೆ ಭಾರೀ ಸಿದ್ಧತೆ ನಡೆಸಲಾಗಿದೆ. ರಾಜ್ಯದ ವಿವಿಧೆಡೆಯಿಂದ ಕಾರ್ಯಕರ್ತರು ಆಗಮಿಸಲಿದ್ದು, ಸರ್ಕಾರಿ ಬಸ್‌ಗಳನ್ನು ಈಗಾಗಲೇ ಬುಕ್ಕಿಂಗ್ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳುವುದರಿಂದ ಯಾವುದೇ ಸಮಸ್ಯೆಯಾಗದಂತೆ ಯಶಸ್ವಿಗೊಳಿಸಲು ರಾಜ್ಯದ ನಾಯಕರು ಪಣತೊಟ್ಟಿದ್ದು, ಅವಿರತವಾಗಿ ಶ್ರಮಿಸುತ್ತಿದ್ದಾರೆ.
ಸಮಾವೇಶದಲ್ಲಿ 4 ಲಕ್ಷ ಕಾರ್ಯಕರ್ತರು, ಬೆಂಬಲಿಗರನ್ನು ಸೇರಿಸಲು ಬಿಜೆಪಿ ಮುಖಂಡರು ಸಕಲ ಸಿದ್ಧತೆಗಳನ್ನು ಕೈಗೊಂಡಿದ್ದಾರೆ. ಈವರೆಗೆ ಕೆಎಸ್'ಆರ್'ಟಿಸಿಯ 80 ಹಾಗೂ ಬಿಎಂಟಿಸಿಯಿಂದ ಸುಮಾರು 350 ಬಸ್'ಗಳನ್ನು ಬುಕ್ಕಿಂಗ್ ಮಾಡಲಾಗಿದೆ. ರಾಜ್ಯದ ವಿವಿಧೆಡೆಯಿಂದ ಕಾರ್ಯಕರ್ತರನ್ನು ಕರೆ ತರಲು ಕೆಎಸ್‌ಆರ್‌ಟಿಸಿಯ 4 ವಿಭಾಗಗಳಿಂದಲೂ ಬಸ್'ಗಳ ವ್ಯವಸ್ಥೆ ಮಾಡಲಾಗಿದೆ. ಜತೆಗೆ ನೂರಾರು ಖಾಸಗಿ ವಾಹನ ಕಾದಿರಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.
ಸಮಾವೇಶವನ್ನು ಯಶಸ್ವಿಗೊಳಿಸುವ ಸಂಬಂಧ ದೆಹಲಿಯಲ್ಲಿ ಸೋಮವಾರ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಸೇರಿದಂತೆ ಇತರೆ ಮುಖಂಡರ ಸಮ್ಮುಖದಲ್ಲಿ ರಾಜ್ಯದ ನಾಯಕರೊಂದಿಗೆ ಸಭೆ ನಡೆಸಲಾಯಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.