ಕೊನೆಗೂ ಮೌನ ಮುರಿದ ಪ್ರಧಾನಿ ನರೇಂದ್ರ ಮೋದಿ

Published : May 16, 2019, 10:28 AM IST
ಕೊನೆಗೂ ಮೌನ ಮುರಿದ ಪ್ರಧಾನಿ ನರೇಂದ್ರ ಮೋದಿ

ಸಾರಾಂಶ

ಕೊನೆಗೂ ಪ್ರಧಾನಿ ನರೇಂದ್ರ ಮೋದಿ ತಮ್ಮ ಬಗ್ಗೆ ಟೈಮ್ಸ್ ವರದಿ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಅವರು ಹೇಳಿದ್ದೇನು?

ನವದೆಹಲಿ: ಅಮರಿಕದ ಟೈಮ್‌ ನಿಯತಕಾಲಿಕೆಯಲ್ಲಿ ತಮ್ಮನ್ನು ವಿಭಾಜಕ ಮುಖ್ಯಸ್ಥ ಎಂದು ಕರೆದಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಮೌನ ಮುರಿದಿದ್ದಾರೆ. ತಮ್ಮ ಘನತೆಯನ್ನು ಹಾಳು ಮಾಡಲು ಕೆಲವರು ಕಳೆದ 20 ವರ್ಷಗಳಿಂದ ಯತ್ನ ನಡೆಸುತ್ತಲೇ ಇದ್ದಾರೆ. ಆದರೆ, ಅದರಿಂದ ಅವರಿಂದ ಅವರ ಘನತೆಯೇ ಮಣ್ಣುಪಾಲಾಗಿದೆ ಎಂದು ಹೇಳಿದ್ದಾರೆ.

 ಚುನಾವಣಾ ಪ್ರಚಾರದ ವೇಳೆ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ ಮೋದಿ, ತಮ್ಮ ವ್ಯಕ್ತಿತ್ವವನ್ನು ಹೆಚ್ಚಿಸಿಕೊಳ್ಳಬೇಕು ಎಂದು ಬಯಸುವವರು 20 ವರ್ಷದಿಂದ ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಯತ್ನಿಸುತ್ತಲೇ ಇದ್ದಾರೆ. ಆದರೆ, ಅದು ಅವರಿಗೇ ತಿರುಗುಬಾಣವಾಗಿದೆ. ಅವರ ಬಗ್ಗೆ ನನಗೆ ಕರುಣೆ ಇದೆ ಎಂದು ಹೇಳುವ ಮೂಲಕ ಟೈಮ್‌ ನಿಯತಕಾಲಿಕೆಯ ಮುಖಪುಟದಲ್ಲಿ ತಮ್ಮ ಬಗ್ಗೆ ಪ್ರಕಟವಾದ ಲೇಖನವನ್ನು ಪ್ರಸ್ತಾಪಿಸಿದರು. 

ನನ್ನನ್ನು ವಿಭಾಜಕ ಎಂದು ಕರೆಯುವ ಮುನ್ನ ವಿಭಜನೆ ಲಂಬವಾಗಿಯೋ ಅಥವಾ ಅಡ್ಡವಾಗಿಯೋ ಎನ್ನುವುದನ್ನು ಅರ್ಥಮಾಡಿಕೊಳ್ಳಬೇಕು. ಒಂದು ವೇಳೆ ವಿಭಜನೆ ಇದ್ದಿದ್ದೇ ಆದರೆ, ಬಡವರು ಒಂದುಗೂಡಿದ್ದಾರೆ ಮತ್ತು ಮೋದಿಯ ಜೊತೆ ಗುರುತಿಸಿಕೊಂಡಿದ್ದಾರೆ. ಬಡವರು ದೇಶದ ಸುಧಾರಣೆ ಬಯಸುವುದಾದರೆ ಅದರಲ್ಲಿ ತಪ್ಪೇನಿದೆ ಎಂದು ಮೋದಿ ಪ್ರಶ್ನಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಾಳೆ ಬೆಂಗಳೂರಿನಲ್ಲಿ ವಿದ್ಯುತ್ ಕಡಿತ: ನಿಮ್ಮ ಏರಿಯಾ ಇದೆಯಾ ಚೆಕ್ ಮಾಡಿ?
ದೇವಸ್ಥಾನದ ಕಾರ್ತಿಕ ದೀಪದ ಪರವಾಗಿ ತೀರ್ಪು ನೀಡಿದ ಜಡ್ಜ್‌, ಸೇಡು ತೀರಿಸಿಕೊಳ್ಳಲು ಮುಂದಾದ ತಮಿಳುನಾಡು ಸರ್ಕಾರ!