
ನವದೆಹಲಿ(ಮಾ.25): ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್ ಮತ್ತು ರಾಜಸ್ಥಾನದ ಸಂಸದರಿಗೆ ಬೆಳಗ್ಗಿನ ಉಪಹಾರವೊಂದನ್ನು ಆಯೋಜಿಸಿ ಮುಂಬರುವ ಎರಡು ರಾಜ್ಯಗಳ ಚುನಾವಣಾ ತಯಾರಿ ಬಗ್ಗೆ ಚರ್ಚಿಸಿದ್ದಾರೆ. ಯಾವುದೇ ಸಮಯದಲ್ಲಾದರೂ ಚುನಾವಣೆ ಎದುರಿಸಲು ಸಿದ್ಧವಾಗಿರಿ ಎಂದು ಮೋದಿ ಸಂಸದರಿಗೆ ಕರೆ ನೀಡಿದ್ದಾರೆ.
ಎಲ್ಲ ಸಂದರ್ಭಗಳಲ್ಲೂ ಚುನಾವಣೆಗೆ ಸನ್ನದ್ಧರಾಗಿದ್ದು, ಅದಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳಿಗೆ ಸಂಬಂಸಿ ಸತತ ಕಾರ್ಯ ನಿರ್ವಹಿಸುತ್ತಿರುವಂತೆ ಪ್ರಧಾನಿ ತಿಳಿಸಿದರು ಎಂದು ಸಭೆಯಲ್ಲಿ ಭಾಗವಹಿಸಿದ್ದ ಸಂಸದರೊಬ್ಬರು ತಿಳಿಸಿದ್ದಾರೆ.
ಸಭೆಯಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಕೂಡ ಸಂಸದರನ್ನುದ್ದೇಶಿಸಿ ಮಾತನಾಡಿದ್ದಾರೆ. ಹಿರಿಯ ನಾಯಕರಾದ ಎಲ್.ಕೆ. ಅಡ್ವಾಣಿ, ಅನಂತ ಕುಮಾರ್ ಕೂಡ ಈ ಸಂದರ್ಭ ಉಪಸ್ಥಿತರಿದ್ದರು. ಗೋವಾ, ಅಂಡಮಾನ್, ನಿಕೋಬಾರ್ ದ್ವೀಪಗಳು ಮತ್ತು ದಾಮನ್ ದಿಯು ಸಂಸದರೂ ಉಪಹಾರ ಕೂಟದಲ್ಲಿ ಭಾಗವಹಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.