ಯುವಕರಿಗಾಗಿ ಮೋದಿಯಿಂದ ಹೊಸ ಯೋಜನೆ: ಈ ರೀತಿ ಇದೇ ಮೊದಲು

Published : Jul 04, 2017, 12:18 PM ISTUpdated : Apr 11, 2018, 12:55 PM IST
ಯುವಕರಿಗಾಗಿ ಮೋದಿಯಿಂದ ಹೊಸ ಯೋಜನೆ: ಈ ರೀತಿ ಇದೇ ಮೊದಲು

ಸಾರಾಂಶ

ಯುವಕರ ಕುರಿತಾದ ನನ್ನ ದೃಷ್ಟಿಕೋನವನ್ನು ಬಿಚ್ಚಿಡಲಿದ್ದೇನೆ’  ಎಂದಿದ್ದಾರೆ

ನವದೆಹಲಿ(ಜು.04): ಮನ್ ಕೀ ಬಾತ್ ಕಾರ್ಯಕ್ರಮದ ಮೂಲಕ ಜನರ ಮನಗೆದ್ದಿರುವ ಪ್ರಧಾನಿ ನರೇಂದ್ರ ಮೋದಿ, ಈಗ ಯುವಕರಿಗಾಗಿ ಪುಸ್ತಕವೊಂದನ್ನು ಬರೆಯಲಿದ್ದಾರೆ. ಪ್ರಧಾನಿಯೊಬ್ಬರು ಅಧಿಕಾರದಲ್ಲಿರುವಾಗಲೇ ಪುಸ್ತಕ ಬರೆಯುತ್ತಿರುವುದು ಇದೇಮೊದಲು.
ವಿದ್ಯಾರ್ಥಿಗಳು ಪರೀಕ್ಷಾ ಒತ್ತಡದಿಂದ ಹೊರಬರುವ ಬಗೆ, ಪರೀಕ್ಷೆಗಳನ್ನು ಎದುರಿಸಲು ಬೇಕಾದ ಸಿದ್ಧತೆ, ಪರೀಕ್ಷೆಯ ಬಳಿಕ ವಿದ್ಯಾರ್ಥಿಗಳು ಏನು ಮಾಡಬೇಕು ಮತ್ತಿತರ ವಿಷಯಗಳ ಬಗ್ಗೆ ಮೋದಿ ತಮ್ಮ ಪುಸ್ತಕದಲ್ಲಿ ವಿವರವಾಗಿ ಬರೆಯಲಿದ್ದಾರೆ.ಅದರಲ್ಲೂ ಮುಖ್ಯವಾಗಿ 10 ಮತ್ತು 12ನೇ ತರಗತಿ ಪರೀಕ್ಷೆಗೆ ಸಂಬಂಧಿಸಿದ ವಿಷಯಗಳು ಪುಸ್ತಕದಲ್ಲಿ ಇರಲಿವೆ.
ಪೆಂಗ್ವಿನ್ ರಾಂಡಮ್ ಹೌಸ್ (ಪಿಆರ್ ಎಚ್) ಪ್ರಕಾಶನದಲ್ಲಿ ಈ ವರ್ಷದ ಅಂತ್ಯಕ್ಕೆ ವಿವಿಧ ಭಾಷೆಗಳಲ್ಲಿ ಪುಸ್ತಕ ಪ್ರಕಟಗೊಳ್ಳಲಿದೆ. ಈ ಮೂಲಕ ಮೋದಿ ವಿದ್ಯಾರ್ಥಿಗಳ ಸ್ನೇಹ ಸಂಪಾದಿಸುವ ವಿಶ್ವಾಸ ಹೊಂದಿದ್ದಾರೆ. ತಮ್ಮ ಮನ್ ಕೀ ಬಾತ್ಕಾರ್ಯಕ್ರಮಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನೆಲೆಯಲ್ಲಿ ಮೋದಿ ತಾವೇ ಸ್ವತಃ ಪುಸ್ತಕ ಬರೆಯುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ‘ನನ್ನ ಹೃದಯಕ್ಕೆ ಹತ್ತಿರವಾದ ವಿಷಯವೊಂದನ್ನು ಬರವಣಿಗೆಗೆ ಆಯ್ಕೆ ಮಾಡಿಕೊಂಡಿದ್ದೇನೆ. ಯುವಕರ ಕುರಿತಾದ ನನ್ನ ದೃಷ್ಟಿಕೋನವನ್ನು ಬಿಚ್ಚಿಡಲಿದ್ದೇನೆ’ ಎಂದು ಮೋದಿ ಅವರ ಹೇಳಿಕೆಯನ್ನು ಪ್ರಕಾಶಕರು ಉಲ್ಲೇಖಿಸಿದ್ದಾರೆ. ಬ್ಲ್ಯೂಕಾಫ್ಟ್ ಡಿಜಿಟಲ್ ಫೌಂಡೇಶನ್ ಎಂಬ ಎನ್ಜಿಒ ಪುಸ್ತಕಕ್ಕೆ ಅಗತ್ಯವಿರುವ ತಾಂತ್ರಿಕ ಮತ್ತು ಜ್ಞಾನದ ನೆರವು ಒದಗಿಸಲಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೆಹಂದಿ ಗಿಡ ಪೂಜಿಸಿದರೆ ಇಷ್ಟೆಲ್ಲಾ ಲಾಭವಿದೆಯೇ?: ಪೂಜೆಗೆ ಇದೇ ಸರಿಯಾದ ದಿನ!
Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!