
ಬೆಂಗಳುರು (ಡಿ.18): ಲಕ್ಷ ದ್ವೀಪ ಭೇಟಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ರಾತ್ರಿ 11 ಗಂಟೆ ಸುಮಾರಿಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಲಿದ್ದಾರೆ. ಕೇವಲ ವಾಸ್ತವ್ಯಕ್ಕಾಗಿ ಮಾತ್ರ ಮೋದಿ ಭೇಟಿ ನೀಡುತ್ತಿದ್ದು, ಈ ವ್ಯಾಪ್ತಿಯಲ್ಲಿ ಯಾವುದೇ ಅಧಿಕೃತ ಕಾರ್ಯಕ್ರಮ ಇಲ್ಲ.
ಗುಜರಾತ್ ಚುನಾವಣೆ ಫಲಿತಾಂಶದ ದಿನದಂದೇ ಪ್ರಧಾನಿ ಮೋದಿ ಮಂಗಳೂರಿಗೆ ಭೇಟಿ ನೀಡುತ್ತಿರುವುದು ಬಿಜೆಪಿ ಪಾಳಯದಲ್ಲೂ ಹೊಸ ಸಂಚಲನ ಸೃಷ್ಟಿಸಿದೆ.
ಇತ್ತೀಚೆಗೆ ಅಪ್ಪಳಿಸಿದ ಓಕಿ ಚಂಡಮಾರುತದಿಂದ ಹಾನಿಗೆ ಒಳಗಾದ ಕೇರಳ,ತಮಿಳುನಾಡು ಹಾಗೂ ಲಕ್ಷ ದ್ವೀಪ ಪ್ರದೇಶದಲ್ಲಿ ಪ್ರಧಾನಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ರಾತ್ರಿ ಮಂಗಳೂರಿನಲ್ಲಿ ತಂಗಲಿರುವ ಅವರು, ಡಿ.19ರಂದು ಬೆಳಗ್ಗೆ 7.30ಕ್ಕೆ ವಿಶೇಷ ವಿಮಾನದ ಮೂಲಕ ಲಕ್ಷ ದ್ವೀಪದ ಅಗತಿ ದ್ವೀಪಕ್ಕೆ ತೆರಳಲಿದ್ದಾರೆ.
ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ನಗರದ ನಗರದ ಸರ್ಕೀಟ್ ಹೌಸ್‌ನಲ್ಲಿ ವಿಶೇಷ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ಎಸ್‌ಪಿಜಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂಗಳೂರು ಕಮಿಷನರ್ ಸೇರಿ ಹಿರಿಯ ಪೊಲೀಸ್ ಅಧಿಕಾರಿಗಳು ಇತರ ಭದ್ರತಾ ಉಸ್ತುವಾರಿಯನ್ನು ನೋಡಿಕೊಳ್ಳುತ್ತಿದ್ದಾರೆ. ಸರ್ಕ್ಯೂಟ್ ಹೌಸ್ ಜತೆಯಲ್ಲಿ ಪರ್ಯಾಯವಾಗಿ ನಗರದ ಒಂದು ಖಾಸಗಿ ಹೋಟೆಲ್‌ನಲ್ಲೂ ಪ್ರಧಾನಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಮೋದಿ ಭೇಟಿ ಹಿನ್ನೆಲೆಯಲ್ಲಿ ನಗರದ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಒಂದು ವಾರ್ಡ್ ಅನ್ನು ಮೀಸಲಿಡಲಾಗಿದೆ.
ತುರ್ತು ಸಂದರ್ಭದಲ್ಲಿ ಅಗತ್ಯವಿದ್ದರೆ ಮುಂಜಾಗ್ರತಾ ಕ್ರಮವಾಗಿ ಮೊದಲೇ ವಾರ್ಡ್ ನಿಗದಿಪಡಿಸಿ ಇಲ್ಲಿ ಸಕಲ ಚಿಕಿತ್ಸಾ ವ್ಯವಸ್ಥೆಯನ್ನು ಮಾಡಲಾಗಿದೆ. ಇಲ್ಲಿಗೂ ಭದ್ರತಾ ಸಿಬ್ಬಂದಿ ಭೇಟಿ ನೀಡಿ ಪರಿಶಿಲನೆ ನಡೆಸಿದ್ದಾರೆ.
ಹೆಲಿಕಾಪ್ಟರ್, ಕಾರು ಆಗಮನ:
ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ವಿಶೇಷ ಭದ್ರತಾ ವ್ಯವಸ್ಥೆ ಕೈಗೊಳ್ಳಬೇಕಾಗಿರುವುದರಿಂದ ವಾಯುಪಡೆ ಹೆಲಿಕಾಪ್ಟರ್ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ. ಇದಲ್ಲದೆ, ವಿಮಾನ ನಿಲ್ದಾಣದಿಂದ ನಗರದ ಸಕ್ರ್ಯೂಟ್ ಹೌಸ್‌ಗೆ ಸಂಚರಿಸಲು ಪ್ರಧಾನಿಗೆ ಮೀಸಲಿರುವ ಕಾರನ್ನು ವಿಮಾನದ ಮೂಲಕ ತರಲಾಗಿದೆ. ಎರಡು ಕಾರುಗಳು ವಿಮಾನ ನಿಲ್ದಾಣ ಆವರಣದಲ್ಲಿ ಪಾರ್ಕ್ ಮಾಡಲಾಗಿದೆ.
ಸರ್ಕೀಟ್ ಹೌಸ್ ಕ್ಲೀನ್:
ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ನಗರದ ಸರ್ಕೀಟ್ ಹೌಸ್ ಹೌಸ್‌ನಲ್ಲಿ ಕ್ಲೀನಿಂಗ್ ನಡೆಯುತ್ತಿದೆ. ಕಳೆದ ತಿಂಗಳಷ್ಟೇ ಧರ್ಮಸ್ಥಳ ಕಾರ್ಯಕ್ರಮದಲ್ಲಿ ಭಾಗವಹಿಸಲು ಮೋದಿ ಮಂಗಳೂರಿಗೆ ಭೇಟಿ ನೀಡಿದ್ದರು. ಒಟ್ಟಾರೆಯಾಗಿ ಪ್ರಧಾನಿ ಮೋದಿ ಅವರದ್ದು ಮೂರನೇ ಮಂಗಳೂರು ಭೇಟಿ ಇದಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.