
ಮಂಗಳೂರು (ಡಿ.17): ಪ್ರಧಾನಿ ನರೇಂದ್ರ ಮೋದಿ ನಾಳೆ ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ನಾಳೆ ರಾತ್ರಿ 11.30 ಕ್ಕೆ ಮಂಗಳೂರಿಗೆ ಆಗಮಿಸಲಿದ್ದು ಸರ್ಕ್ಯೂಟ್ ಹೌಸ್ ಅಥವಾ ಖಾಸಗಿ ಹೊಟೇಲ್'ನಲ್ಲಿ ವಾಸ್ತವ್ಯ ಹೂಡುವ ಸಾಧ್ಯತೆಯಿದೆ. ಮಂಗಳೂರಿನ ಮೂರು ಕಡೆ ವಾಸ್ತವ್ಯಕ್ಕೆ ಸ್ಥಳ ನಿಗದಿಯಾಗಿದ್ದರೂ ಸರ್ಕಾರಿ ಐಬಿಯಲ್ಲಿ ಉಳಿದುಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.
ಓಖಿ ಚಂಡಮಾರುತದಿಂದ ಸಂಭವಿಸಿರುವ ಹಾನಿ ವೀಕ್ಷಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಲಕ್ಷದ್ವೀಪಕ್ಕೆ ಪ್ರವಾಸ ಕೈಗೊಂಡಿದ್ದಾರೆ. ಲಕ್ಷದ್ವೀಪಕ್ಕೆ ಕೊಚ್ಚಿ ಮುಖಾಂತರ ಹೋಗಬೇಕಿತ್ತಾದರೂ ಮಂಗಳೂರು ಹತ್ತಿರವಿದೆ ಎಂಬ ಕಾರಣಕ್ಕೆ ಇಲ್ಲಿಂದ ಪ್ರಯಾಣ ಬೆಳೆಸುತ್ತಿದ್ದಾರೆ. ಮಂಗಳೂರಿನಲ್ಲಿ ನಾಳೆ ರಾತ್ರಿ ವಾಸ್ತವ್ಯ ಹೂಡಿ ನಾಡಿದ್ದು ಬೆಳಿಗ್ಗೆ 7 ಗಂಟೆಗೆ ಲಕ್ಷದ್ವೀಪಕ್ಕೆ ಪ್ರಯಾಣ ಬೆಳೆಸುತ್ತಾರೆ. ಪಕ್ಷದ ವತಿಯಿಂದ ಅವರನ್ನು ಸ್ವಾಗತಿಸಲಿದ್ದು, ಮಂಗಳೂರಿನಲ್ಲಿ ವಾಸ್ತವ್ಯ ಬಿಟ್ಟರೆ ಬೇರೆ ಯಾವುದೇ ಕಾರ್ಯಕ್ರಮಗಳಿಲ್ಲ ಎಂದು ಬಿಜೆಪಿ ಸಂಸದ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.