ಕ್ಯಾ ಹುವಾ?: ಭಾಷಣ ಮೊಟಕುಗೊಳಿಸಿ ಮೋದಿ ಹೊರಟಿದ್ದೆಲ್ಲಿ?

Published : Feb 27, 2019, 01:47 PM ISTUpdated : Feb 27, 2019, 01:56 PM IST
ಕ್ಯಾ ಹುವಾ?: ಭಾಷಣ ಮೊಟಕುಗೊಳಿಸಿ ಮೋದಿ ಹೊರಟಿದ್ದೆಲ್ಲಿ?

ಸಾರಾಂಶ

ಭಾರತೀಯ ವಾಯುಸೇನೆಯ ಮಿಗ್-21 ವಿಮಾನ ಪತನ| ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣ| ಭಾರತ-ಪಾಕ್ ಎರಡೂ ರಾಷ್ಟ್ರದಲ್ಲಿ ಬಿಗುವಿನ ವಾತಾವರಣ| ದೆಹಲಿಯ ವಿಜ್ಞಾನ ಭವನದಲ್ಲಿ ಭಾಷಣ ಅರ್ಧಕ್ಕೆ ನಿಲ್ಲಸಿದ ಪ್ರಧಾನಿ ಮೋದಿ| ದಾಳಿ ಮಾಹಿತಿ ಪಡೆದು ಭಾಷಣ ನಿಲ್ಲಿಸಿ ಹೊರನಡೆದ ಪ್ರಧಾನಿ|

ನವದೆಹಲಿ(ಫೆ.27): ಭಾರತೀಯ ವಾಯುಸೇನೆಯ ಮಿಗ್-21 ವಿಮಾನ ಪತನದ ಹಿನ್ನೆಲೆಯಲ್ಲಿ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಘಟನೆಯ ಬಳಿಕ ಭಾರತ-ಪಾಕ್ ಎರಡೂ ರಾಷ್ಟ್ರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಉನ್ನತ ಮಟ್ಟದ ಸಭೆಗಳ ಸರದಿ ಆರಂಭವಾಗಿದೆ.

ಅದರಂತೆ ನವದೆಹಲಿಯ ವಿಜ್ಞಾನ ಭವನದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುತ್ತಿದ್ದ ಪ್ರಧಾನಿ ಮೋದಿ, ಕಾರ್ಯಕ್ರಮ ಮೊಟಕುಗೊಳಿಸಿ ತೆರಳಿರುವುದು ತೀವ್ರ ಕುತೂಹಲ ಮೂಡಿಸಿದೆ.

ವಿಜ್ಞಾನ ಭವನದಲ್ಲಿ ಮೋದಿ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಸಚಿವ ರಾಜವರ್ಧನ್ ರಾಠೋಡ್ ದಾಳಿಯ ಕುರಿತು ಮಾಹಿತಿ ನೀಡಿದರು. ಕೂಡಲೇ ಭಾಷಣ ನಿಲ್ಲಿಸಿದ ಮೋದಿ ಅಲ್ಲಿಂದ ತೆರಳಿದರು.

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರಿನಲ್ಲಿ ಊಬರ್‌ ಕ್ರಾಂತಿಯ ಹೆಜ್ಜೆ, B2B ಲಾಜಿಸ್ಟಿಕ್ಸ್, ಮೆಟ್ರೋ ಟಿಕೆಟ್‌ ಕೂಡ ಲಭ್ಯ!
ದೆವ್ವಗಳ ಬಗ್ಗೆ ಪಿಎಚ್‌ಡಿ ಮಾಡಲಿದ್ದಾರೆ ಬಾಗೇಶ್ವರ ಬಾಬಾ ಧೀರೇಂದ್ರ ಶಾಸ್ತ್ರಿ! ಘೋಸ್ಟ್ ಬಗ್ಗೆ ತಿಳಿಯಲು ನಿಮಗೆ ಆಸಕ್ತಿ ಇದೆಯೇ?