
ನವದೆಹಲಿ[ಆ.04]: ಬಿಜೆಪಿ ಶ್ರಮಿಕ ವರ್ಗದ ಪಕ್ಷವಾಗಿದೆ. ಯಾವುದೇ ಒಂದು ಕುಟುಂಬಕ್ಕೆ ಸೇರಿದ ಪಕ್ಷವಾಗಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.
ಬಿಜೆಪಿ ಸಂಸದರಿಗಾಗಿ ಎರಡು ದಿನಗಳ ಕಾಲ ಹಮ್ಮಿಕೊಂಡಿರುವ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು. ಪಕ್ಷದ ಕಾರ್ಯಕರ್ತರನ್ನು ಮಗುವನ್ನು ಪೋಷಿಸುವ ತಾಯಿಗೆ ಹೋಲಿಸಿದ ಮೋದಿ, ಕಾರ್ಯಕರ್ತರೇ ಪಕ್ಷದ ಜೀವಾಳ. ಅವರನ್ನು ಎಂದಿಗೂ ನಿರ್ಲಕ್ಷಿಸುವಂತಿಲ್ಲ. ನೀವು ಮಂತ್ರಿಯಾದರೂ, ಸಂಸದರಾದರೂ ಪಕ್ಷದ ಕಾರ್ಯಕರ್ತರ ಜೊತೆ ನಿರಂತರ, ಉತ್ತಮ ಒಡನಾಟ ಹೊಂದಿರಬೇಕು. ಅಲ್ಲದೇ, ಪಕ್ಷ ಸಾಧಿಸಿದ ಎಲ್ಲ ಯಶಸ್ಸಿನ ಕೀರ್ತಿಯನ್ನು ಪ್ರಧಾನಿ ಕಾರ್ಯಕರ್ತರಿಗೆ ಸಲ್ಲತಕ್ಕದ್ದು ಎಂದರು.
ಇದೇ ವೇಳೆ ನಮ್ಮದು ನೈಜ ಪಕ್ಷವೇ ಹೊರತೂ ‘ಜೋಡಿಸಿದ’ ಪಕ್ಷವಲ್ಲ. ಮೇಲಾಗಿ ನಾವು ಈ ಹಂತ ತಲುಪಲು ನಮ್ಮ ಸಿದ್ಧಾಂತ ಕಾರಣವೇ ಹೊರತೂ, ಯಾವುದೇ ಕೌಟುಂಬಿಕ ಹಿನ್ನೆಲೆ ಅಲ್ಲ ಎಂದು ಪರೋಕ್ಷವಾಗಿ ಕಾಂಗ್ರೆಸ್‌ಗೆ ತಿರುಗೇಟು ನೀಡಿದರು.
ಮುಂದುವರಿದು ಮಾತನಾಡಿದ ಪ್ರಧಾನಿ, ಸಂಸದರು, ಸಚಿವರು ವಯಸ್ಸಿನ ಅಂತರವಿದ್ದರೂ ನಿರಂತರ ಕಲಿಕಾ ಮನೋಭಾವ ಹೊಂದಿರಬೇಕು. ಇದರಿಂದ ನಾವು ಹೆಚ್ಚಿನದ್ದನ್ನು ಕಲಿಯಲು ಸಾಧ್ಯ ಎಂದು ಸಲಹೆ ನೀಡಿದರು. ತ್ರಿಪುರಾದ ಸ್ಥಳೀಯ ಚುನಾವಣೆಯಲ್ಲಿ ಪಕ್ಷದ ಸಾಧಿಸಿದ ಯಶಸ್ಸಿನ ಬಗ್ಗೆ ಸಭೆಯಲ್ಲಿ ಶ್ಲಾಘನೆ ವ್ಯಕ್ತವಾಯಿತು. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ಡಾ, ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್, ಸಚಿವ ಅರ್ಜುನ್ ರಾಮ್ ಮೇಘಾವಲ್ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.