
ಹೈದರಾಬಾದ್: ಇಸ್ಲಾಮಿಕ್ ಸ್ಟೇಟ್ (ಐಸಿಸ್) ಉಗ್ರ ಸಂಘಟನೆಯ ಬಗ್ಗೆ ಅನುಕಂಪ ಹೊಂದಿದ್ದ ಕೋಣಕಲ್ಲ ಸುಬ್ರಮಣ್ಯಂ ಅಲಿಯಸ್ ಉಮರ್ (22) ಎಂಬುವನನ್ನು ಹೈದರಾಬಾದ್ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. 2014ರಲ್ಲಿ ಇಸ್ಲಾಂಗೆ ಮತಾಂತರಗೊಂಡಿದ್ದ ಈತ ಉಗ್ರ ಚಟುವಟಿಕೆಗಳಿಂದ ಪ್ರಭಾವಿತನಾಗಿದ್ದ ಎನ್ನಲಾಗಿದೆ.
ಇತರ ಐಸಿಸ್ ಅನುಕಂಪವಾದಿಗಳ ಜತೆ ಈತ ಸಾಮಾಜಿಕ ಮಾಧ್ಯಮಗಳಲ್ಲಿ ನಂಟು ಬೆಳೆಸಿಕೊಂಡ್ಡಿದ್ದ. ಭಾರತ ದೇಶದಲ್ಲಿ ಕೆಲ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಬಯಸಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಈತನ ಚಟುವಟಿಕೆಯ ಸುಳಿವು ಸಿಕ್ಕ ಬೆನ್ನಲ್ಲೇ ವಿಶೇಷ ತನಿಖಾ ತಂಡ ಉಮರ್‌ನನ್ನು ಬಂಧಿಸಿತು. ಈತನ ಬಳಿ ಸಿಕ್ಕ ಮೊಬೈಲ್‌ನಲ್ಲಿ ಐಸಿಸ್ ಅನುಕಂಪವಾದಿಗಳ ಜತೆ ಚಾಟ್ ನಡೆಸಿದ ಮಾಹಿತಿ ಇದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಪೊಲೀಸರು ತಿಳಿಸಿದ್ದಾರೆ.
ಈತನ ಮೇಲೆ ದೇಶದ್ರೋಹ, ಕ್ರಿಮಿನಲ್ ಸಂಚು, ಅಕ್ರಮ ಚಟುವಟಿಕೆ- ಮೊದಲಾದ ಪ್ರಕರಣ ದಾಖಲಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.