
ಚಿಕ್ಕಮಗಳೂರು (ಜ.18): ಚಿಕ್ಕಮಗಳೂರಿನಲ್ಲಿ ಏಬಿವಿಪಿ ಕಾರ್ಯಕರ್ತ ಅಭಿಷೇಕ್ ಆತ್ಮಹತ್ಯೆ ಖಂಡಿಸಿ ಪ್ರತಿಭಟನೆಗೆ ಮುಂದಾದ ABVP ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರತಿಭಟನೆ ನಡೆಸದಂತೆ ಎಸ್.ಪಿ. ಅಣ್ಣಾಮಲೈ ಸೂಚನೆ ನೀಡಿದ್ದರೂ ಏಬಿವಿಪಿ ಕಾರ್ಯಕರ್ತರು ಬಲವಂತವಾಗಿ ಕಾಲೇಜು ಬಂದ್’ಗೆ ಕರೆ ನೀಡಿದ್ದರು. ಅಲ್ಲದೆ ಕಾಲೇಜಿಗೆ ತೆರಳಿ ವಿದ್ಯಾರ್ಥಿಗಳನ್ನು ತರಗತಿಯಿಂದ ಹೊರಗಡೆ ಕಳುಹಿಸಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಒತ್ತಾಯಿಸಿದ್ದರು.
ಘೋಷಣೆ ಕೂಗುತ್ತಾ ಪ್ರತಿಭಟನೆಗೆ ಮುಂದಾಗಿದ್ದಾಗ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರ ಜೊತೆ ಪ್ರತಿಭಟನಾನಿರತರು ಮಾತಿನ ಚಕಮಕಿ ನಡೆಸಿದ್ದಾರೆ.
ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
(ಸಾಂದರ್ಭಿಕ ಚಿತ್ರ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.