ಕೋರ್ಟ್ ಆವರಣದಲ್ಲೇ ಬಡಿದಾಡಿಕೊಂಡರು ಪೊಲೀಸರು-ವಕೀಲರು!

Published : Nov 02, 2019, 06:45 PM IST
ಕೋರ್ಟ್ ಆವರಣದಲ್ಲೇ ಬಡಿದಾಡಿಕೊಂಡರು ಪೊಲೀಸರು-ವಕೀಲರು!

ಸಾರಾಂಶ

ಕೋರ್ಟ್ ಆವರಣದಲ್ಲೇ ಬಡಿದಾಡಿಕೊಂಡರು ಪೊಲೀಸರು-ವಕೀಲರು| ವಾಹನ ಪಾರ್ಕಿಂಗ್​​ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು-ವಕೀಲರ ನಡುವೆ ವಾಗ್ದಾದ| ಘರ್ಷಣೆಯಲ್ಲಿ ತೀವ್ರವಾಗಿ ಗಾಯಗೊಂಡ ಇಬ್ಬರು ವಕೀಲರು| ಪೊಲೀಸ್ ವಾಹನಗಳಿಗೆ ಬೆಂಕಿ  ಹಚ್ಚಿದ ರೊಚ್ಚಿಗೆದ್ದ ವಕೀಲರ ಗುಂಪು| ಪೊಲೀಸರ ಮೇಲೆ ಗುಂಡು ಹಾರಿಸಿದ ಆರೋಪ ಹೊರಿಸಿದ ವಕೀಲರು| ವಕೀಲರತ್ತ ಗುಂಡು ಹಾರಿಸಿಲ್ಲ ಎಂದು ಸ್ಪಷ್ಟಪಡಿಸಿದ ಪೊಲೀಸರು|  

ನವದೆಹಲಿ(ನ.02): ದೆಹಲಿಯ ತೀಸ್ ಹಜಾರಿ ಕೋರ್ಟ್ ಆವರಣದಲ್ಲಿ ಪೊಲೀಸರು ಹಾಗೂ ವಕೀಲರ ನಡುವೆ ಘರ್ಷಣೆ ಸಂಭವಿಸಿದೆ. 

ವಾಹನ ಪಾರ್ಕಿಂಗ್​​ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತು ವಕೀಲರ ಮಧ್ಯೆ ವಾಗ್ವಾದ ನಡೆದಿದೆ ಎನ್ನಲಾಗಿದ್ದು, ಘರ್ಷಣೆಯಲ್ಲಿ ಇಬ್ಬರು ವಕೀಲರು ತೀವ್ರವಾಗಿ ಗಾಯಗೊಂಡಿದ್ದಾರೆ. 

ಅಲ್ಲದೇ ರೊಚ್ಚಿಗೆದ್ದ ವಕೀಲರ ಗುಂಪು ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ. ಇನ್ನು ಪೊಲೀಸರು ತಮ್ಮ ಮೇಲೆ ಗುಂಡು ಹಾರಿಸಿದ್ದಾರೆ ಎಂದು ವಕೀಲರು ಆರೋಪಿಸಿದ್ದು, ಈ ಆರೋಪವನ್ನು ಪೊಲಿಸರು ನಿರಾಕರಿಸಿದ್ದಾರೆ.

ಪೊಲೀಸರ ಗುಂಡಿನ ದಾಳಿಯಲ್ಲಿ ತಮ್ಮ ಇಬ್ಬರು ಸಹೋದ್ಯೋಗಿಗಳು ಗಾಯಗೊಂಡಿದ್ದಾರೆ ಎಂದು ವಕೀಲರು ಆರೋಪಿಸಿದ್ದಾರೆ. ಆದರೆ ವಕೀಲರ ಆರೋಪವನ್ನು ತಳ್ಳಿಹಾಕಿರುವ ಪೊಲೀಸರು, ತಾವು ಗುಂಡು ಹಾರಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

ನ್ಯಾಯಾಲಯದ ಸಂಕೀರ್ಣದಲ್ಲಿನ ವಾಹನ ಪಾರ್ಕಿಂಗ್ ವಿಷಯದಲ್ಲಿ ಪೊಲೀಸರ ಮತ್ತು ವಕೀಲರ ನಡುವೆ ಘರ್ಷಣೆ ನಡೆದಿದೆ ಎಂದು ತಿಳಿದುಬಂದಿದೆ. ಈ ವೇಳೆ ವಾಗ್ವಾದ ಹಿಂಸಾಚಾರಕ್ಕೆ ತಿರುಗಿದ್ದು, ಪೊಲೀಸರು ಮತ್ತು ವಕೀಲರು ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಸ್ಥಳಕ್ಕೆ ಐದು ಅಗ್ನಿ ಶಾಮಕ ವಾಹನಗಳು ಆಗಮಿಸಿದ್ದು, ವಾಹನಕ್ಕೆ ಹಚ್ಚಿದ್ದ ಬೆಂಕಿ ನಂದಿಯುವ ಕಾರ್ಯದಲ್ಲಿ ತೊಡಗಿವೆ. ಅಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ನ್ಯಾಯಲಯದ ಆವರಣದಲ್ಲಿ ಜಮಾಯಿಸಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ತರುವ ಕಾರ್ಯದಲ್ಲಿ ನಿರತಾಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ
ವೃದ್ಧೆಯ ಕೇರ್ ಟೇಕರ್‌ನಿಂದಲೇ ₹31 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಬಿಹಾರ ಮೂಲದ ಚಾಂದಿನಿ ಬಂಧನ!