ಬಾಂಬ್ ನಾಗ ವಿಡಿಯೋ ಪ್ರಕರಣ: ಪೊಲೀಸ್ ಆಯುಕ್ತರಿಂದ ಗೃಹ ಸಚಿವರಿಗೆ ವಿವರಣೆ

By Suvarna Web DeskFirst Published Apr 22, 2017, 11:55 AM IST
Highlights

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ಆಯುಕ್ತರು,ಆರೋಪಿಗಳು ಪೊಲೀಸರ ಮೇಲೆ ಆರೋಪ ಮಾಡುವುದು ಸಹಜ ಇಂತಹ ಆರೋಪಗಳಿಗೆ ಪ್ರತಿಕ್ರಿಯಿಸುವ ಅಗತ್ಯವಿಲ್ಲ' ಎಂದು ತಿಳಿಸಿದ್ದಾರೆ.

ಬೆಂಗಳೂರು(ಏ.22): ಬಾಂಬ್ ನಾಗ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ಅವರು ಗೃಹ ಸಚಿವ ಜಿ. ಪರಮೇಶ್ವರ್ ಅವರಿಗೆ ವಿವರಣೆ ನೀಡಿದ್ದಾರೆ.

ವಿಡಿಯೋದಲ್ಲಿ ನಾಗ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಸಂಸದ ಪಿ.ಸಿ. ಮೋಹನ್ ಹಾಗೂ ಪೊಲೀಸ್ ಅಧಿಕಾರಿಗಳ ಮೇಲೆ ಆರೋಪ ಮಾಡಿದ್ದಾನೆ.  ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ಆಯುಕ್ತರು,ಆರೋಪಿಗಳು ಪೊಲೀಸರ ಮೇಲೆ ಆರೋಪ ಮಾಡುವುದು ಸಹಜ ಇಂತಹ ಆರೋಪಗಳಿಗೆ ಪ್ರತಿಕ್ರಿಯಿಸುವ ಅಗತ್ಯವಿಲ್ಲ' ಎಂದು ತಿಳಿಸಿದ್ದಾರೆ.

ದಿನೇಶ್​ ಗುಂಡೂರಾವ್ ಹಾಗೂ ಸಂಸದ ಪಿ.ಸಿ. ಮೋಹನ್ ನನ್ನ ಮೇಲೆ ರೌಡಿ ಶೀಟರ್ ಓಪನ್ ಮಾಡಿಸಿದ್ದರು. ಎಂದು ಉಲ್ಲೇಖಿಸಿದ್ದಾರೆ. ಅಲ್ಲದೇ ನನ್ನ ಮೇಲೆ 8 ಬಾರಿ ರೌಡಿ ಶೀಟರ್​ ಹಾಕಿಸಿದ್ದರು. ಹೆಣ್ಣೂರು ಪೊಲೀಸ್​ ಇನ್ಸ್​ಪೆಕ್ಟರ್​ ಮತ್ತು ನಾಲ್ವರು ಐಪಿಎಸ್​ ಅಧಿಕಾರಿಗಳಿಗೆ ಆ ಹಣ ಸೇರಿತ್ತು ಎಂದು ನಾಗ ಹೇಳಿಕೊಂಡಿದ್ದಾನೆ. ಹಳೆಯ ನೋಟುಗಳನ್ನು ಹೊಸ ನೋಟುಗಳಿಗೆ ಬದಲಾವಣೆ ಮಾಡಿಕೊಡಿ ಎಂದು ಪೊಲೀಸರು ಎರಡು ತಿಂಗಳಿಂದ ನನ್ನ ಬೆನ್ನು ಬಿದ್ದಿದ್ದರು ಎಂದು ನಾಗ ಆರೋಪಿಸಿದ್ದಾನೆ. ದಿನೇಶ್ ಗುಂಡೂರಾವ್,ಸಂಸದ ಪಿ.ಸಿ. ಮೋಹನ್  ನಾಗನ ಆರೋಪವನ್ನು ನಿರಾಕರಿಸಿದ್ದಾರೆ.

click me!