ಇನ್ಸ್ ಪೆಕ್ಟರ್ ಗೆ ಮಹಿಳಾ ಪೇದೆ ಆವಾಜ್‌ : ವಿಡಿಯೋ ವೈರಲ್‌

Published : Jun 07, 2019, 10:54 AM IST
ಇನ್ಸ್ ಪೆಕ್ಟರ್ ಗೆ  ಮಹಿಳಾ ಪೇದೆ ಆವಾಜ್‌ : ವಿಡಿಯೋ ವೈರಲ್‌

ಸಾರಾಂಶ

ಮಹಿಳಾ ಪೊಲೀಸ್ ಪೇದೆಯೋರ್ವರು ಕಾನ್ಸ್ ಟೇಬಲ್ ಓರ್ವರು ಸರ್ಕಲ್ ಇನ್ಸ್ ಪೆಕ್ಟರ್ ಗೆ ಆವಾಜ್ ಹಾಕಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. 

ಹುಬ್ಬಳ್ಳಿ :  ರಜೆ ಕೊಡಲಿಲ್ಲ ಮಹಿಳಾ ಕಾನ್ಸ್‌ಟೇಬಲ್‌ವೊಬ್ಬರು ಸರ್ಕಲ್‌ ಇನ್ಸ್‌ಪೆಕ್ಟರ್‌ (ಸಿಪಿಐ)ಗೆ ಇಲ್ಲಿನ ಉಪನಗರ ಪೊಲೀಸ್‌ ಠಾಣೆಯಲ್ಲಿ ಆವಾಜ್‌ ಹಾಕಿದ್ದು, ಇದೀಗ ವಿಡಿಯೋ ವೈರಲ್‌ ಆಗಿದೆ.

ಸಿಪಿಐ ಡಿಸೋಜಾ ರಜೆ ಕೊಡಲಿಲ್ಲ ಎನ್ನುವ ಕಾರಣಕ್ಕೆ ಅವರ ಕ್ಯಾಬಿನ್‌ಗೆ ನುಗ್ಗಿದ ಲೇಡಿ ಕಾನ್ಸ್‌ಟೇಬಲ್‌ ಬಾಯಿಗೆ ಬಂದಂತೆ ಕೂಗಾಡಿದ್ದಾರೆ. ಈ ವೇಳೆ ಠಾಣೆಯ ಇತರೆ ಸಿಬ್ಬಂದಿ ಸಮಾಧಾನ ಪಡಿಸಲು ಯತ್ನಿಸಿದರೂ ಶಾಂತವಾಗದ ಮಹಿಳಾ ಪೇದೆ, ಸಿಪಿಐ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 

ಠಾಣೆಯ ಸಿಬ್ಬಂದಿಯೊಬ್ಬರು ಇದನ್ನೆಲ್ಲ ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದು, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಬಿಟ್ಟಿದ್ದು, ಅದೀಗ ವೈರಲ್‌ ಆಗಿದೆ. ಈ ಬಗ್ಗೆ ಇದೀಗ ಸಾಕಷ್ಟುಚರ್ಚೆಗೆ ಗ್ರಾಸವನ್ನುಂಟು ಮಾಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಿಟೆಕ್ ಪದವಿಯನ್ನು ಪೂರ್ಣಗೊಳಿಸಲು ಅಸಮರ್ಥರಾಗಿರುವ ವಿದ್ಯಾರ್ಥಿಗಳಿಗೆ ಹೊಸ ಯೋಜನೆ ಘೋಷಿಸಿದ ಐಐಟಿ ಮದ್ರಾಸ್‌
ದುಬೈನಲ್ಲಿ ಕುಳಿತು ಕರಾವಳಿಯಲ್ಲಿ ಕೋಮು ಭಾವನೆ ಕೆರಳಿಸುವ ಪೋಸ್ಟ್ ಹಾಕುತ್ತಿದ್ದವನ ಬಂಧಿಸಿದ ಮಂಗಳೂರು ಪೊಲೀಸರು