
ಬೆಂಗಳೂರು[ಜೂ.20]: ಪೊಲಿಸರ ಮೇಲೆ ಹಲ್ಲೆಗೆ ಮುಂದಾದ ಇಬ್ಬರು ಪುಂಡರ ಮೇಲೆ ಗುಂಡು ಹಾರಿಸಿದ ಘಟನೆ ರಾಜಗೋಪಾಲನಗರದ ಕರೀಂ ಸಾಬ್ ಲೇಔಟ್'ನಲ್ಲಿ ನಡೆದಿದೆ.
ಮನೆ ಮುಂದೆ ನಿಲ್ಲಿಸಿದ್ದ 20 ಕ್ಕೂ ಹೆಚ್ಚು ವಾಹನಗಳ ಗ್ಲಾಸ್ ಪುಡಿ ಪುಡಿ ಮಾಡಿದ್ದ ಈ ಇಬ್ಬರು ಪುಂಡರನ್ನು ಸಿಸಿಟಿವಿಯಲ್ಲಿ ಪೊಲೀಸರು ಪತ್ತೆ ಹಚ್ಚಿ ಇಂದು ಬೆಳಿಗ್ಗೆ ಬಂಧಿಸಲು ಹೋದಾಗ ಮುಖ್ಯ ಪೇದೆ ಹನುಮಂತರಾಜು ಮತ್ತು ಶ್ರೀನಿವಾಸ್ ಮೇಲೆ ಮಾರಕಾಸ್ತ್ರ ಗಳಿಂದ ಹಲ್ಲೆ ನಡೆಸಿದ್ದರು.
ನಂತರ ಶರಣಾಗದೆ ಓಡಿಹೋಗುತ್ತಿದ್ದಾಗ ಮಹಾಲಕ್ಷ್ಮಿ ಲೇಔಟ್ ಇನ್ಸ್ ಪೆಕ್ಟರ್ ಲೋಹಿತ್ ರಫಿ ಮತ್ತು ಸುಧಾಕರ್ ಎಂಬುವವರ ಕಾಲಿಗೆ ಗುಂಡು ಹಾರಿಸಿದ್ದಾರೆ. 2 ದಿನಗಳ ಹಿಂದಷ್ಟೆ 100 ಕ್ಕೂ ಹೆಚ್ಚು ಸರಗಳ್ಳತನದಲ್ಲಿ ಭಾಗಿಯಾಗಿದ್ದ ಅಚ್ಯುತ್ ಕುಮಾರ್ ಗಣಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.