
ಬೆಂಗಳೂರು (ಅ.19): ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಮಹತ್ವದ ಸುಳಿವು ಲಭ್ಯವಾಗಿದೆ ಎಂದು ತಿಳಿದು ಬಂದಿದೆ.
ಪೊಲೀಸ್ ಮೂಲಗಳಿಂದ ಸುವರ್ಣನ್ಯೂಸ್’ಗೆ ಸಿಕ್ಕಿರುವ ಮಾಹಿತಿ ಪ್ರಕಾರ ಹಂತಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹಳೇ ಪಲ್ಸರ್ನಲ್ಲಿ ಬಂದಿದ್ದ ಕೊಲೆ ಆರೋಪಿಗಳು. ಕೊಲೆ ಮಾಡಿದ್ದ ಸಂದರ್ಭದಲ್ಲಿ ಮಂಕಿ ಕ್ಯಾಪ್ ಹಾಕಿದ್ದರು.
ರುದ್ರೇಶ್’ಗೆ ಕರೆಮಾಡಿ ಹೊಟೇಲ್’ಗೆ ಬರುವಂತೆ ಹೇಳಿರುವವರಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಘಟನೆ ಬಳಿಕ ಆ ಇಬ್ಬರು ಮೊಬೈಲ್ ಸ್ವಿಚ್ ಆಫ್ ಮಾಡಿದ್ದಾರೆ ಎನ್ನಲಾಗಿದೆ.
ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ಆರೆಸ್ಸೆಸ್ ಕಾರ್ಯಕರ್ತನಾಗಿದ್ದ ರುದ್ರೇಶ್ ಭಾನುವಾರದಂದು ದುಷ್ಕರ್ಮಿಗಳಿಂದ ಹಾಡುಹಗಲೇ ಕೊಲೆಗೀಡಾಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.