
ಬೆಂಗಳೂರು(ಸೆ.26): ರಾಜ್ಯ ಪೊಲೀಸರಿಗೆ ಸರ್ಕಾರ ದಸರಾ ಹಬ್ಬಕ್ಕೆ ಭರ್ಜರಿ ಉಡುಗೊರೆ ನೀಡಿದೆ. ಅಕ್ಟೋಬರ್ ತಿಂಗಳಿಗೆ ಪೊಲೀಸರ ವೇತನ ಹೆಚ್ಚಳ ಖಚಿತವಾಗಿದೆ. ಪೊಲೀಸರ ವೇತನ ಪರಿಷ್ಕರಣೆ ಕುರಿತ ವರದಿಯನ್ನ ಸರ್ಕಾರಕ್ಕೆ ಎಡಿಜಿಪಿ ರಾಘವೇಂದ್ರ ಔರಾದ್ಕರ್ ಸಲ್ಲಿಸಿದ್ದಾರೆ. ಡಿಪಿಜಿ ಓಂ ಪ್ರಕಾಶ್, ನಗರ ಪೊಲಿಸ್ ಆಯುಕ್ತ ಎಂ.ಎನ್. ಮೇಘರಿಕ್ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಗೃಹ ಸಚಿವ ಡಾ. ಪರಮೇಶ್ವರ್ಗೆ ವರದಿ ಸಲ್ಲಿಸಿದ್ದಾರೆ.
ರಾಜ್ಯ ಪೊಲೀಸರಿಗೆ ಶೇ. 22ರಷ್ಟು ವೇತನ ಹೆಚ್ಚಳಕ್ಕೆ ಸಮಿತಿ ಶಿಫಾರಸು ಮಾಡಿದೆ. ಸಮಿತಿಯ ವರದಿ ಆಧರಿಸಿ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ. ಇನ್ನು 3 ರಾಜ್ಯಗಳಾದ ಕೇರಳ, ಆಂಧ್ರ ಪ್ರದೇಶ, ಮತ್ತು ಪಶ್ಚಿಮ ಬಂಗಾಳ ಪೊಲೀಸ್ ಇಲಾಖೆಯ ವೇತನ ಆಧರಿಸಿ ರಾಜ್ಯ ಪೊಲೀಸ್ ವೇತನ ಪರೀಷ್ಕರಣೆ ಸಮಿತಿ ಸರ್ಕಾರಕ್ಕೆ ವರದಿ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.