
ನವದೆಹಲಿ(ಫೆ.12): ನೊಬೆಲ್ ಪ್ರಶಸ್ತಿ ವಿಜೇತ ಹಾಗೂ ಮಕ್ಕಳ ಹಕ್ಕುಗಳ ಹೋರಾಟಗಾರ ಕೈಲಾಶ್ ಸತ್ಯಾರ್ಥಿ ಅವರ ಕಳುವಾದ ನೊಬೆಲ್ ಪಾರಿತೋಷಕ ಹಾಗೂ ಪ್ರಶಸ್ತಿ ಪತ್ರವನ್ನು ದೆಹಲಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ಮೂವರು ಕಳ್ಳರು ಸತ್ಯಾರ್ಥಿ ಅವರು ವಾಸವಿದ್ದ ಅರವಲ್ಲಿ ಅಪಾರ್ಟ್'ಮೆಂಟ್'ನ ಕೈಲಾಶ್ ಅವರ ಫ್ಲಾಟ್ ಒಳಗೊಂಡು ಮೂರು ಮನೆಗಳಲ್ಲಿ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದರು. ಮೂವರನ್ನು ಬಂಧಿಸಿರುವ ಪೊಲೀಸರು ನೊಬೆಲ್ ಪದಕ ಹಾಗೂ ಒಡವೆಗಳನ್ನು ವಶಪಡಿಸಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.