ಗವರ್ನರ್ ಸಂಚಾರಕ್ಕೆ ಅನುವು ಮಾಡಿಕೊಡಲು ಹೋಗಿ ಯಡವಟ್ಟು: ಕರ್ತವ್ಯ ನಿರತ ಪೊಲೀಸ್ ಪೇದೆಗೆ ಗುದ್ದಿದ ಬೈಕ್ ಸವಾರ

Published : Jan 15, 2017, 12:22 AM ISTUpdated : Apr 11, 2018, 12:43 PM IST
ಗವರ್ನರ್ ಸಂಚಾರಕ್ಕೆ ಅನುವು ಮಾಡಿಕೊಡಲು ಹೋಗಿ ಯಡವಟ್ಟು: ಕರ್ತವ್ಯ ನಿರತ ಪೊಲೀಸ್ ಪೇದೆಗೆ ಗುದ್ದಿದ ಬೈಕ್ ಸವಾರ

ಸಾರಾಂಶ

ಆಸ್ಪತ್ರೆಯಲ್ಲಿ ಇದೀಗ ಚಿಂತಾಜನಕವಾಗಿ ಮಲಗಿರುವ ಪೊಲೀಸ್ ಕಾನ್ಸ್​ಟೇಬಲ್ ರಮೇಶ್. ಯಲಹಂಕ ಸಂಚಾರಿ ಠಾಣೆಯ ಪೇದೆ ರಮೇಶ್ ನಿನ್ನೆ ಸಂಜೆ ಏಳುವರೆ ಸುಮಾರಿಗೆ  ಬೆಂಗಳೂರಿನ ಯಲಹಂಕದ ಏರ್​ಪೋರ್ಟ್​ ರಸ್ತೆಯಲ್ಲಿ ಕರ್ತವ್ಯ ನಿರತರಾಗಿದ್ದರು. ಗವರ್ನರ್ ವಾಹನಕ್ಕೆ ಟ್ರಾಫಿಕ್ ಕ್ಲೀಯರ್ ಮಾಡಿಕೊಡುವ ಕರ್ತವ್ಯದಲ್ಲಿ ನಿರತರಾಗಿದ್ದಾಗ ಏಕಾಏಕಿ ಬೈಕೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಪೇದೆ ರಮೇಶ್ ತೆಲೆಗೆ ಗಂಭೀರ ಗಾಯವಾಗಿದೆ. ತಕ್ಷಣವೇ ಸ್ಥಳೀಯ ಆಸ್ಪತ್ರೆಯಲ್ಲಿ  ತುರ್ತು ಚಿಕಿತ್ಸೆ ನೀಡಿ, ಅಲ್ಲಿಂದ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ಸೇರಿಲಾಗಿದೆ.

ಬೆಂಗಳೂರು(ಜ.15): ನಿನ್ನೆ ಸಂಕ್ರಾಂತಿ ಹಬ್ಬ. ಈ ಹಬ್ಬವನ್ನೂ ಮರೆತು ಆತ ಸರ್ಕಾರಿ ಸೇವೆಯಲ್ಲಿ ತೊಡಗಿದ್ದ. ಗವರ್ನರ್ ವಾಹನ ಸಂಚಾರಕ್ಕೆ ಅನುವು ಮಾಡಿಕೊಡುವ ಕರ್ತವ್ಯದಲ್ಲಿ ನಿರತನಾಗಿದ್ದ ಪೇದೆ ಇದೀಗ ಆಸ್ಪತ್ರೆ ಸೇರಿದ್ದಾನೆ.

ಆಸ್ಪತ್ರೆಯಲ್ಲಿ ಇದೀಗ ಚಿಂತಾಜನಕವಾಗಿ ಮಲಗಿರುವ ಪೊಲೀಸ್ ಕಾನ್ಸ್​ಟೇಬಲ್ ರಮೇಶ್. ಯಲಹಂಕ ಸಂಚಾರಿ ಠಾಣೆಯ ಪೇದೆ ರಮೇಶ್ ನಿನ್ನೆ ಸಂಜೆ ಏಳುವರೆ ಸುಮಾರಿಗೆ  ಬೆಂಗಳೂರಿನ ಯಲಹಂಕದ ಏರ್​ಪೋರ್ಟ್​ ರಸ್ತೆಯಲ್ಲಿ ಕರ್ತವ್ಯ ನಿರತರಾಗಿದ್ದರು. ಗವರ್ನರ್ ವಾಹನಕ್ಕೆ ಟ್ರಾಫಿಕ್ ಕ್ಲೀಯರ್ ಮಾಡಿಕೊಡುವ ಕರ್ತವ್ಯದಲ್ಲಿ ನಿರತರಾಗಿದ್ದಾಗ ಏಕಾಏಕಿ ಬೈಕೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಪೇದೆ ರಮೇಶ್ ತೆಲೆಗೆ ಗಂಭೀರ ಗಾಯವಾಗಿದೆ. ತಕ್ಷಣವೇ ಸ್ಥಳೀಯ ಆಸ್ಪತ್ರೆಯಲ್ಲಿ  ತುರ್ತು ಚಿಕಿತ್ಸೆ ನೀಡಿ, ಅಲ್ಲಿಂದ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ಸೇರಿಲಾಗಿದೆ.

ಇನ್ನು ಪೇದೆ ರಮೇಶ್ ಗೆ ಅಪಘಾತ ಮಾಡಿದ ರಾಜು ಕೂಡ ಗಾಯಗೊಂಡಿದ್ದು ಆತನನ್ನ್ನೂ ಸಹ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಆರಂಭದಲ್ಲಿ  ಗವರ್ನರ್ ಬೆಂಗಾವಲು ವಾಹನವೇ ಪೇದೆಗೆ ಡಿಕ್ಕಿ ಹೊಡೆದಿದೆ ಎಂದು ಸುದ್ದಿಯಾಗಿತ್ತು. ಆದರೆ ಈಗ ಬೈಕ್ ಸವಾರ ಡಿಕ್ಕಿಹೊಡೆದಿದ್ದಾನೆ ಎನ್ನುವುದು ಸ್ಪಷ್ಟವಾಗಿದೆ.

ಇನ್ನು  ಪೇದೆ ರಮೇಶ್ ಆರೋಗ್ಯದ ಬಗ್ಗೆ 12 ಘಂಟೆಯ ವರೆಗೂ ಏನೂ ಹೇಳೋದಕ್ಕೆ  ಸಾಧ್ಯವಿಲ್ಲವೆಂದು ವೈದ್ಯರು ತಿಳಿಸಿದ್ದಾರೆ. ಹಿರಿಯ ಅಧಿಕಾರಿಗಳು ಕೂಡ ಆಸ್ಪತ್ರೆಗೆ ಬಂದು ಆರೋಗ್ಯ ವಿಚಾರಿಸಿದ್ದಾರೆ. ಯಲಹಂಕ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಡನ್ನಾಗಿ ಸೋಶಿಯಲ್‌ ಮೀಡಿಯಾದಲ್ಲಿ ಸನ್ನಿ ಲಿಯೋನ್‌ ಫೋಟೋ ಹಂಚಿಕೊಂಡ ಅಶ್ವಿನ್‌, ಇದಕ್ಕಿದೆ ಐಪಿಎಲ್ ಲಿಂಕ್‌!
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್