
ಮೈಸೂರು (ಏ.09): ಗುಂಡ್ಲುಪೇಟೆ ಹಾಗೂ ನಂಜನಗೂಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದ್ದು ಮತದಾನ ಮುಂದುವರೆದಿದೆ.
ಗುಂಡ್ಲುಪೇಟೆ ಕ್ಷೇತ್ರದ ಹಲವೆಡೆ ಮತಯಂತ್ರದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು ಮತದಾನ ರಂಭವಾಗಲು ವಿಳಂಬವಾಗಿದೆ. ಗುಂಡ್ಲುಪೇಟೆ ತಾ. ಭೀಮನಬೀಡು ಮತಗಟ್ಟೆಯಲ್ಲಿ ದೋಷ ಕಂಡುಬಂದಿದ್ದು, ಬ್ಲಾಕ್ನಂ.3 ಹಾಗೂ ಮಡಹಳ್ಳಿಯಲ್ಲೂ ಮತದಾನ ಆರಂಭವಾಗಲು ವಿಳಂಬವಾಗಿದೆ.
ಇನ್ನೊಂದು ಕಡೆ ಮೂಲ ಸೌಕರ್ಯ ಕಲ್ಪಿಸಿಲ್ಲ ಎಂದು ಆರೋಪಿಸಿ ಮತದಾನ ಬಹಿಷ್ಕರಿಸಿದ ಘಟನೆ ನಂಜನಗೂಡು ವಿಧಾನಸಭಾ ಕ್ಷೇತ್ರದ ಮಾಧವನಗರದಲ್ಲಿ ನಡೆದಿದೆ. ಮೂಲಸೌಕರ್ಯವಿಲ್ಲಿ ಮರಿಚೀಕೆಯಾಗಿದೆ ಎಂದು ಮತದಾರರು ಆರೋಪಿಸಿದ್ದಾರೆ. ಮತದಾನ ಬಹಿಷ್ಕರಿಸಿದ್ದಲ್ಲದೇ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.