
ಲಖ್ನೋ : ಜಗತ್ತಿನಲ್ಲಿ ದಿನ ದಿನಕ್ಕೂ ಕೂಡ ಜನಸಂಖ್ಯೆ ಏರುಗತಿಯಲ್ಲಿ ಸಾಗುತ್ತಿದೆ. ವಿಶ್ವದಲ್ಲೇ ಚೀನಾ ನಂ.1 ಆಗಿದ್ದರೆ 2 ನೇ ಸ್ಥಾನದಲ್ಲಿ ಭಾರತ ಇದೆ. ಈ ಪ್ರಮಾಣದಲ್ಲಿ ಜನಸಂಖ್ಯೆ ಏರಿಕೆಯನ್ನು ತಡೆಯುವಲ್ಲಿ ಮಹಿಳೆಯರ ಪಾತ್ರವೇ ಹೆಚ್ಚಿನ ಪ್ರಮಾಣದಲ್ಲಿದೆ.
ಭಾರತದಲ್ಲಿ ಕುಟುಂಬ ಯೋಜನೆಗೆ ಒಳಪಡುತ್ತಿರುವವರಲ್ಲಿ ಮಹಿಳೆಯರ ಪ್ರಮಾಣ ಶೇ.93ರಷ್ಟಿದೆ ಎಂದು ಅಂಕಿ ಅಂಶಗಳು ತಿಳಿಸುತ್ತಿವೆ.
ಇನ್ನು ಭಾರತದಲ್ಲಿ ಅತೀ ಹೆಚ್ಚಿನ ಪ್ರಮಾಣದಲ್ಲಿ ಉತ್ತರ ಪ್ರದೇಶ ಜನಸಂಖ್ಯೆಯನ್ನು ಹೊಂದಿದ್ದು,ಉತ್ತರ ಪ್ರದೇಶದ ಮಹಿಳೆಯರೇ ಜನಸಂಖ್ಯೆ ನಿಯಂತ್ರಣದ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯದಲ್ಲಿ ತೊಡಗಿಸಿಕೊಂಡು ಕುಟುಂಬ ಯೋಜನೆಯ ಬಗ್ಗೆ ಮನವರಿಕೆ ಮಾಡುತ್ತಿದ್ದಾರೆ.
ಅಲ್ಲದೇ ಬೇಡದ ಗರ್ಭವನ್ನು ತಡೆಯುವ ಸಲುವಾಗಿ ತಮ್ಮ ಪತಿಯಂದಿರಿಗೆ ಕಾಂಡೋಮ್ ಗಳನ್ನು ಬಳಕೆ ಮಾಡುವ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ. ಇಲ್ಲಿನ ಅತ್ಯಧಿಕ ಜನಸಂಖ್ಯೆಯನ್ನು ಹೊಂದಿರುವ ಜಿಲ್ಲೆಗಳಲ್ಲಿ ಮಹಿಳೆಯರು ಜನಸಂಖ್ಯೆಯ ನಿಯಂತ್ರಣದಲ್ಲಿ ಹೆಚ್ಚಿನ ಪಾತ್ರ ವಹಿಸುತ್ತಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.