
ಮನೀಲಾ: ಪಿಲಿಫ್ಫೀನ್ಸ್‌ನ ವಾಣಿಜ್ಯ ಕೇಂದ್ರ ಮನಿಲಾದಲ್ಲಿ ಆಗಬಾರದ್ದು ಆಗಿ ಹೋಗಿದೆ. ರಸ್ತೆಯಲ್ಲಿ ಹೋಗುತ್ತಿದ್ದವರೆಲ್ಲಾ ಒಂದು ಕ್ಷಣ ವಾಹನ ನಿಲ್ಲಿಸಿ ಆ ದೃಶ್ಯವನ್ನು ಕಣ್ತುಂಬಿಕೊಂಡಿದ್ದಾರೆ. ಅಷ್ಟಕ್ಕೂ ಆಗಿದ್ದೇನೆಂದರೆ ಜನನಿಬಿಡ ಸ್ಥಳದಲ್ಲಿ ಹಾಕಿದ್ದ ಡಿಜಿಟಲ್ ಸೂಚನಾ ಫಲಕದಲ್ಲಿ ಅಚಾನಕ್ ಆಗಿ ಅಶ್ಲೀಲ ವಿಡಿಯೋವೊಂದು ಪ್ರಸಾರವಾಗಿದೆ.
30 ಸೆಕೆಂಡ್ ವಿಡಿಯೋ ಪ್ರಸಾರ ವಾಗಿದ್ದು, ತಕ್ಷಣವೇ ಎಚ್ಚೆತ್ತ ಅಧಿಕಾರಿಗಳು ಸ್ಕ್ರೀನ್ ಅನ್ನು ಆಫ್ ಮಾಡಿದ್ದಾರೆ. ಆದರೆ ಅಷ್ಟರಲ್ಲಾಗಲೇ ಪ್ರಮಾದ ಆಗಿಹೋಗಿತ್ತು. ಕೆಲವರು ತಮ್ಮ ಮೊಬೈಲ್‌ನಲ್ಲಿ ವಿಡಿಯೋವನ್ನು ಸೆರೆಹಿಡಿದಿದ್ದಾರೆ.
ಕೊನೆಗೆ ಮುಜುಗರಕ್ಕೀಡಾದ ಮಾಕಟಿ ನಗರದ ಮೇಯರ್ ತನಿಖೆಗೆ ಆದೇಶಿಸಿದ್ದಾರೆ. ತನಿಖೆ ಪೂರ್ಣಗೊಳ್ಳುವ ವರೆಗೂ ಸೂಚನಾ ಫಲಕವನ್ನು ಆನ್ ಮಾಡದಂತೆ ಸೂಚನೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.