
ಬೆಂಗಳೂರು (ಏ. 03): ಪೋಸ್ಟ್ ಕಾರ್ಡ್ ಆನ್ ಲೈನ್ ಪೋರ್ಟಲ್ನಿಂದ ಪ್ರಚೋದನಕಾರಿ ಪ್ರಕರಣದಡಿಯಲ್ಲಿ ಆರೋಪಿ ಮಹೇಶ್ ವಿಕ್ರಂ ಹೆಗಡೆಯನ್ನ ಮೂರು ದಿನಗಳ ಕಾಲ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದೇ ತಿಂಗಳ 5 ನೇ ತಾರೀಖಿನವರೆಗೂ 1ನೇ ಎಸಿಎಂಎಂ ನ್ಯಾಯಾಲಯ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡಿದೆ. ಡಿಸಿಪಿ ಜಿನೇಂದ್ರ ಕಣವಿ ನೇತೃತ್ವದಲ್ಲಿ ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ.
ಕಳೆದೊಂದು ವರ್ಷದಿಂದ ಪೋಸ್ಟ್ ಕಾರ್ಡ್ ವೆಬ್ಸೈಟ್ನಲ್ಲಿ ಪ್ರಕಟವಾದ ಸುದ್ದಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಸುದ್ದಿಗಳ ಬಗ್ಗೆ ವಿಚಾರಣೆ ನಡೆಸಲಾಗಿದೆ. ಈ ಹಿಂದೆ ಸಂಜಯ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಕೇಸ್ ಬಗ್ಗೆ ತನಿಖೆ , ಝಾನ್ಸಿ ರಾಣಿ ಲಕ್ಷ್ಮಿ ಬಾಯಿ ವಿರುದ್ಧ ಅವಹೇಳನಕಾರಿ ಸುದ್ದಿ ಬಿತ್ತರಿಸಿದ್ದ ಆರೋಪ ಎಲ್ಲಾ ಆಯಾಮಗಳಲ್ಲೂ ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.