
ಹುಬ್ಬಳ್ಳಿ(ಆ.26): ಭಾರತದಲ್ಲಿ ನಿರುದ್ಯೋಗದಿಂದಾಗಿ ಯುವಕರು ಭಯೋತ್ಪಾದನಾ ಸಂಘಟನೆಗಳಿಗೆ ಸೇರುತ್ತಿದ್ದಾರೆ ಎಂದು ಹೇಳಿ ಅಕ್ಷಮ್ಯ ಅಪರಾಧ ಎಸಗಿರುವ ರಾಹುಲ್ ಗಾಂಧಿ ಕೂಡಲೇ ರಾಷ್ಟ್ರದ ಜನತೆ ಮುಂದೆ ಕ್ಷಮೆ ಯಾಚಿಸಬೇಕು ಎಂದು ಸಂಸದ ಪ್ರಹ್ಲಾದ್ ಜೋಶಿ ಒತ್ತಾಯಿಸಿದರು.
ನಗರದಲ್ಲಿ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವುದೋ ದೇಶಕ್ಕೆ ಹೋಗಿ ತಾಯ್ನಾಡಿನ ವಿರುದ್ಧ ಮಾತನಾಡುವುದು ಎಷ್ಟರ ಮಟ್ಟಿಗೆ ಸರಿ? ರಾಹುಲ್ ಈ ರೀತಿ ಮಾತನಾಡುವುದು ಅಕ್ಷಮ್ಯ ಅಪರಾಧವಲ್ಲವೇ? ಹೀಗಾಗಿ ಈ ಕೂಡಲೇ ಅವರು ಭಾರತದ ಜನರ ಮುಂದೆ ಕ್ಷಮೆ ಯಾಚಿಸಬೇಕು. ನಮ್ಮ ವಿರೋಧಿ ರಾಷ್ಟ್ರಗಳಿಗೆ ಅನುಕೂಲವಾಗುವಂತಹ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಪೆದ್ದ ಎಂದು ಕರೆಯದೇ ಮತ್ತಿನ್ನೇನೆಂದು ಕರೆಯಬೇಕು? ಇನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಗಿದ್ದಾರೋ ರಾಜ್ಯಸಭಾ ಸದಸ್ಯ ಬಿ.ಕೆ. ಹರಿಪ್ರಸಾದ್ ಸಹ ಹಾಗೆಯೇ ಇದ್ದಾರೆ ಎಂದರು.
ಇನ್ನು ರಾಜ್ಯದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿಯ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದ ಗೊಂದಲದಲ್ಲೇ ಕಾಲ ಕಳೆಯುತ್ತಿದೆ. ಮೈತ್ರಿ ಸರ್ಕಾರದ ಆಡಳಿತ ಸಂಪೂರ್ಣ ನೆಲಕಚ್ಚಿದೆ. ಮೈತ್ರಿ ಸರ್ಕಾರಕ್ಕೆ ತಮ್ಮ ಬೆಂಬಲ ಇದೆಯೋ ಇಲ್ಲವೋ ಎಂಬುದನ್ನು ಸಿದ್ದರಾಮಯ್ಯ ಸ್ಪಷ್ಟಪಡಿಸಬೇಕು. ರಾಜ್ಯದಲ್ಲಿ ಸರಿಯಾಗಿ ಆಡಳಿತ ನಡೆಸುವ ಇಚ್ಛೆ ಇದ್ದರೆ ನಡೆಸಲಿ. ಇಲ್ಲವಾದಲ್ಲಿ ಕುಮಾರಸ್ವಾಮಿ ರಾಜಿನಾಮೆ ನೀಡಿ ಮನೆಗೆ ತೆರಳಲಿ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.