
ಬೆಂಗಳೂರು (ಡಿ.04): ರಾಜರಾಜೇಶ್ವರಿ ನಗರದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಆಸೆ ಇಟ್ಟುಕೊಂಡಿದ್ದ ಪ್ರಜ್ಷಲ್ ಕನಸು ಭಗ್ನವಾಗಿದೆ.
ರಾಜರಾಜೇಶ್ವರಿ ನಗರದ ಟಿಕೆಟ್ ಆಕಾಂಕ್ಷಿಗಳ ಮತ್ತು ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಈ ಬಗ್ಗೆ ಸ್ಪಷ್ಟ ಸೂಚನೆ ನೀಡಿರುವ ಕುಮಾರಸ್ವಾಮಿ ಸ್ಥಳೀಯರಿಗೆ ಪ್ರಾತಿನಿದ್ಯ ನೀಡುವುದಾಗಿ ಹೇಳಿದ್ದಾರೆ. ಮೂಲಗಳ ಪ್ರಕಾರ ಐಎಎಸ್ ಅಧಿಕಾರಿ ದಿವಂಗತ ಡಿಕೆ ರವಿ ಮಾವ ಎಚ್ ಹನುಮಂತರಾಯಪ್ಪಗೆ ಆರ್ ಆರ್ ನಗರದ ಟಿಕೆಟ್ ನೀಡಲು ಯೋಜಿಸಲಾಗಿದೆ ಎನ್ನಲಾಗಿದೆ. ಸದ್ಯ ಹನುಮಂತರಾಯಪ್ಪ ಕಾಂಗ್ರೆಸ್ ಪಕ್ಷದಲ್ಲಿದ್ದು ಜನವರಿ ಮೊದಲ ವಾರದಲ್ಲಿ ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ. ಈಗಾಗಲೇ ಹನುಮಂತರಾಯಪ್ಪ ಜೊತೆ ಒಂದು ಸುತ್ಗತಿನ ಮಾತುಕತೆಯೂ ನಡೆಸಿದ್ದು, ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ವೇಳೆಗೆ ಅಧಿಕೃತ ಘೋಷಣೆಯಾಗುವ ಸಾಧ್ಯತೆ ಇದೆ. ಹನುಮಂತರತಾಯಪ್ಪ ಕೂಡಾ ವಿದಾನಸಭೆ ಪ್ರವೇಶಿಸುವ ಇಚ್ಚೆ ಹೊಂದಿದ್ದು, ಕಾಂಗ್ರೆಸ್'ನಿಂದ ಮುನಿರತ್ನಂ ಅವರಿಗೆ ಆರ್ ಆರ್ ನಗರ ಕ್ಷೇತ್ರದ ಟಿಕೆಟ್ ಅಂತಿಮವಾಗಿರುವುದರಿಂದ , ಜೆಡಿಎಸ್ ಕಡೆ ಮುಖ ಮಾಡಿದ್ದಾರೆ ಎನ್ನಲಾಗಿದೆ. ಇನ್ನು ಕುಮಾರಸ್ವಾಮಿ ಕೂಡಾ ಪ್ರಜ್ವಲ್ ಗೆ ಟಿಕೆಟ್ ನೀಡುವ ಸಾಧ್ಯತೆಯನ್ನು ಸಾರಾಸಗಟಾಗಿ ತಳ್ಳಿಹಾಕಿರುವುದು ಈ ಮಾತಿಗೆ ಇನ್ಗಷ್ಟು ಪುಷ್ಟಿ ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.