ಯುವ JDS ಅಧ್ಯಕ್ಷರಾಗಿ ನಿಖಿಲ್ ಆಯ್ಕೆ: ಪ್ರತಿಕ್ರಿಯೆ ನಿರಾಕರಿಸಿದ ಪ್ರಜ್ವಲ್

Published : Jul 04, 2019, 02:05 PM ISTUpdated : Jul 04, 2019, 07:36 PM IST
ಯುವ JDS ಅಧ್ಯಕ್ಷರಾಗಿ ನಿಖಿಲ್ ಆಯ್ಕೆ: ಪ್ರತಿಕ್ರಿಯೆ ನಿರಾಕರಿಸಿದ ಪ್ರಜ್ವಲ್

ಸಾರಾಂಶ

ಜೆಡಿಎಸ್ ನಲ್ಲಿ ನಿಖಿಲ್ ಕುಮಾರಸ್ವಾಮಿಗೆ ಮಹತ್ವದ ಜವಾಬ್ದಾರಿ ವಹಿಸಲಾಗಿದೆ. ಜೆಡಿಎಸ್ ಯುವ ಘಟಕಕ್ಕೆ ನಿಖಿಲ್ ಕುಮಾರಸ್ವಾಮಿ ಅವರನ್ನು ಆಧ್ಯಕ್ಷರಾಗಿ ನೇಮಿಸಲಾಗಿದ್ದು, ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲ್ಲ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. 

ನವದೆಹಲಿ [ಜು.04]:  ರಾಜ್ಯ ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆಗೆ ಎಚ್.ಕೆ ಕುಮಾರಸ್ವಾಮಿ ನೇಮಿಸಲಾಗಿದೆ. ಈ ಆಯ್ಕೆ ನನಗೆ ಸಂತೋಷವಾಗಿದೆ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. 

"

ನವದೆಹಲಿಯಲ್ಲಿ ಮಾತನಾಡಿದ ಹಾಸನ ಸಂಸದ ಪ್ರಜ್ವಲ್ ರೇವಣ್ಣ, ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ತೊರೆದಿರುವ ಎಚ್. ವಿಶ್ವನಾಥ್ ಅವರಿಗೆ ಸರಿಸಮಾನವಾದ ಹುದ್ದೆ ದೊರೆತಲ್ಲಿ ಇನ್ನಷ್ಟು  ಖುಷಿಯಾಗುತ್ತದೆ ಎಂದರು.

ಇನ್ನು ಇದೇ ವೇಳೆ ಜೆಡಿಎಸ್ ನಲ್ಲಿ ಹಲವು ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ನಿಖಿಲ್ ಕುಮಾರಸ್ವಾಮಿ ಅವರಿಗೆ ಜಾತ್ಯಾತೀತ ಜನತಾದಳದ ಯುವ ಘಟಕದ ಅಧ್ಯಕ್ಷ ಸ್ಥಾನ ನೀಡಿರುವ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಪಕ್ಷದಿಂದ ತಮಗೆ ಸಿಕ್ಕಿರುವ ಮಾಹಿತಿಯಲ್ಲಿ ಅಧ್ಯಕ್ಷ, ಕಾರ್ಯಾಧ್ಯಕ್ಷ ಸ್ಥಾನಗಳ ಬಗ್ಗೆ ಮಾತ್ರವೇ ಮಾಹಿತಿ ನೀಡಲಾಗಿದೆ ಎಂದರು. 

ನಿಖಿಲ್ ಕುಮಾರಸ್ವಾಮಿಗೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸ್ಥಾನ ನೀಡಿದ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಪಕ್ಷದಿಂದ ಅಧಿಕೃತ ಮಾಹಿತಿ ಸಿಗದೆ  ನಿಖಿಲ್ ನೇಮಕದ ಬಗ್ಗೆ ಪ್ರತಿಕ್ರಿಯಿಸುವುದು ನನ್ನ ಸ್ಥಾನಕ್ಕೆ ಸೂಕ್ತವಾಗಲಾರದು. ನಾನು ಯಾವುದೇ ಹುದ್ದೆಯ ಆಕಾಂಕ್ಷಿಯಲ್ಲ ಎಂದು  ಸಂಸದ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ತಮಿಳು ಚಿತ್ರದಲ್ಲಿ ಕನ್ನಡ ಹಾಡು ಬಳಸಿದ್ದಕ್ಕೆ ದಂಡ, ಒಟಿಟಿ ರಿಲೀಸ್‌ಗೂ ಮುನ್ನ 30 ಲಕ್ಷ ಠೇವಣಿ ಇಡಿ ಎಂದ ಕೋರ್ಟ್‌!