ಜೆಡಿಎಸ್‌ ಪರ ಅಂಬೇಡ್ಕರ್‌ ಮೊಮ್ಮಗ ಪ್ರಚಾರ

By Suvarna Web DeskFirst Published Feb 28, 2018, 8:52 AM IST
Highlights

ಮುಂದಿನ ವಿಧಾನಸಭೆ ಚುನಾವಣೆ ವೇಳೆ ಜೆಡಿಎಸ್‌ ಪರವಾಗಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಬಿಎಸ್ಪಿ ಮುಖಂಡರಾದ ಮಾಯವತಿ ಮತ್ತು ಬಿ.ಆರ್‌.ಅಂಬೇಡ್ಕರ್‌ ಅವರ ಮೊಮ್ಮಗ ಪ್ರಕಾಶ್‌ ಅಂಬೇಡ್ಕರ್‌ ಒಟ್ಟಿಗೆ ಪ್ರಚಾರ ಮಾಡಲಿದ್ದಾರೆ ಎಂದು ಮಾಜಿ ಸಚಿವ ಎಚ್‌.ಡಿ.ರೇವಣ್ಣ ತಿಳಿಸಿದ್ದಾರೆ.

ಹಾಸನ: ಮುಂದಿನ ವಿಧಾನಸಭೆ ಚುನಾವಣೆ ವೇಳೆ ಜೆಡಿಎಸ್‌ ಪರವಾಗಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಬಿಎಸ್ಪಿ ಮುಖಂಡರಾದ ಮಾಯವತಿ ಮತ್ತು ಬಿ.ಆರ್‌.ಅಂಬೇಡ್ಕರ್‌ ಅವರ ಮೊಮ್ಮಗ ಪ್ರಕಾಶ್‌ ಅಂಬೇಡ್ಕರ್‌ ಒಟ್ಟಿಗೆ ಪ್ರಚಾರ ಮಾಡಲಿದ್ದಾರೆ ಎಂದು ಮಾಜಿ ಸಚಿವ ಎಚ್‌.ಡಿ.ರೇವಣ್ಣ ತಿಳಿಸಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂವರೂ ಮುಖಂಡರು ರಾಜ್ಯದ 224 ಕ್ಷೇತ್ರಗಳಲ್ಲೂ ಸಂಚರಿಸಿ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ. ಈಗಿನಿಂದಲೇ ಈ ಪ್ರಚಾರಕ್ಕೆ ಪೂರ್ವ ತಯಾರಿ ನಡೆಯುತ್ತಿದೆ ಎಂದರು.

15 ದಿನಗಳಲ್ಲಿ ಮೈತ್ರಿ ತೀರ್ಮಾನ:

ಜೆಡಿಎಸ್‌ ರಾಷ್ಟ್ರೀಯ ಪಕ್ಷಗಳೊಡನೆ ಸೇರಿ ಸರ್ಕಾರ ರಚಿಸುವ ಪರಿಸ್ಥಿತಿಯೇ ಬರುವುದಿಲ್ಲ. ಜೆಡಿಎಸ್‌ 120 ಸ್ಥಾನಗಳನ್ನು ಗೆದ್ದು ಸ್ಪಷ್ಟಬಹುಮತ ಪಡೆಯಲಿದೆ. ಕೆಲವು ಕಡೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಶರದ್‌ ಪವಾರ್‌ ಜೊತೆ ಮತ್ತು ಕಮ್ಯೂನಿಷ್‌್ಟಪಕ್ಷಗಳ ಜೊತೆ ಹೊಂದಾಣಿಕೆ ಮಾಡಿಕೊಳ್ಳುವ ಬಗ್ಗೆ 15 ದಿನಗಳಲ್ಲಿ ತೀರ್ಮಾನವಾಗಲಿದೆ ಎಂದರು.

ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲ ಪಡೆಯುವುದು ಮತ್ತು ಪ್ರಜ್ವಲ್‌ ರೇವಣ್ಣ ಬೆಂಗಳೂರಿನ ರಾಜಾಜಿನಗರದಲ್ಲಿ ಸ್ಪರ್ಧಿಸುವ ಕುರಿತು ಪಕ್ಷದ ಹಿರಿಯ ಮುಖಂಡರು ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ. ಈಗ ಪ್ರಕಟಿಸುವ ಮೊದಲ ಪಟ್ಟಿಯಲ್ಲಿ ಬೇರೆ ಕಡೆ ಬದಲಾವಣೆ ಆಗುತ್ತದೆಯೇ ಎಂಬುದು ಗೊತ್ತಿಲ್ಲ. ಆದರೆ, ಹಾಸನ ಜಿಲ್ಲೆಯ ಅಭ್ಯರ್ಥಿಗಳು ಮಾತ್ರ ಬದಲಾಗುವುದಿಲ್ಲ ಎಂದರು.

ಗೋವಾ ಕಾಂಗ್ರೆಸ್ಸಿಗರನ್ನು ಸುಮ್ಮನಿರಿಸಲಿ:

ಮಹದಾಯಿ ವಿಚಾರವಾಗಿ ರಾಹುಲ್‌ ಗಾಂಧಿ ಅವರು ಕೇಂದ್ರ ಸರ್ಕಾರವನ್ನು ಟೀಕಿಸುವ ಬದಲು ಗೋವಾದಲ್ಲಿರುವ ತಮ್ಮ ಪಕ್ಷದ ಶಾಸಕರು, ಮುಖಂಡರು ಹಾಗೂ ಯೋಜನೆಗೆ ವಿರೋಧ ಮಾಡುತ್ತಿರುವವರನ್ನು ಸುಮ್ಮನಿರಸಲಿ. ಎರಡೂ ಪಕ್ಷಗಳು ಮಹದಾಯಿ ವಿಚಾರದಲ್ಲಿ ದ್ವಿಮುಖ ನೀತಿ ಅನುಸರಿಸುವ ಮೂಲಕ ರಾಜ್ಯದ ಜನರಿಗೆ ಟೋಪಿ ಹಾಕುತ್ತಿದ್ದಾರೆ ಎಂದರು.

click me!