
ಬೆಂಗಳೂರು(ಆ.11): ಸರ್ಕಾರಿ ಕಚೇರಿಗಳಲ್ಲಿ ಕೇವಲ ಸಾಹಿತಿಗಳ ಫೋಟೋ ಹಾಕುವುದಕ್ಕೆ ಹಿರಿಯ ನಟ, ನಿರ್ದೇಶಕ, ಸಾಮಾಜಿಕ ಚಿಂತಕ ಪ್ರಕಾಶ ಬೆಳವಾಡಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಸಮಾಜದಲ್ಲಿ ಇತರ ರಂಗಗಳಲ್ಲಿಯೂ ಸಾಧನೆ ಮಾಡಿರುವ ಹಲವಾರು ಜನರಿದ್ದು, ಸರ್ಕಾರ ಕೇವಲ ಸಾಹಿತಿಗಳಿಗೆ, ಬುದ್ದಿಜೀವಿಗಳಿಗೆ ಪ್ರಾಮುಖ್ಯತೆ ನೀಡುವುದನ್ನು ನಿಲ್ಲಿಸಬೇಕು ಎಂದು ಬೆಳವಾಡಿ ಆಗ್ರಹಿಸಿದ್ದಾರೆ. ಕೃಷಿ, ವಿಜ್ಞಾನ ಸೇರಿದಂತೆ ಹಲವಾರು ರಂಗಗಳಲ್ಲಿ ಸಾಧಕರಿದ್ದು, ಸರ್ಕಾರ ಅವರನ್ನು ಗುರುತಿಸುವ ಅವಶ್ಯಕತೆ ಇದೆ ಎಂದು ಬೆಳವಾಡಿ ಒತ್ತಾಯಿಸಿದ್ದಾರೆ.
ಯೂಟ್ಯೂಬ್ ಚಾನೆಲ್‌ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಸಾಹಿತಿಗಳು ಮತ್ತು ಬುದ್ದಿಜೀವಿಗಳ ವಿರುದ್ದ ಹರಿಹಾಯ್ದಿರುವ ಬೆಳವಾಡಿ, ಸರ್ಕಾರದ ಸವಲತ್ತುಗಳಿಗಾಗಿ ಇಲ್ಲಸಲ್ಲದ ವಿಷಯಗಳನ್ನು ಪ್ರಸ್ತಾಪಿಸುತ್ತಾ ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಸಾಹಿತಿಗಳು ಮತ್ತು ಬುದ್ದಿಜೀವಿಗಳು ನಮ್ಮ ಸಮಾಜದಲ್ಲಿ ಪ್ರಾಮುಖ್ಯತೆ ಪಡೆದಿರುವುದು ದುರದೃಷ್ಟಕರ ಎಂದು ಹೇಳಿದರು.
ಇದೇ ವೇಳೆ ತಮ್ಮನ್ನು ಬಲಪಂಥೀಯ, ಆರ್‌ಎಸ್‌ಎಸ್ ಬೆಂಬಲಿಗ, ಮೋದಿ ಭಕ್ತ ಎಂದು ಆರೋಪಿಸುವವರಿಗೂ ಖಡಕ್ ಉತ್ತರ ನೀಡಿದ ಪ್ರಕಾಶ ಬೆಳವಾಡಿ, ನನ್ನ ಸೈದ್ಧಾಂತಿಕ ಬದ್ಧತೆ ಏನೆಂಬುದು ಹೇಳುವ ಅಧಿಕಾರ ಇವರಿಗೆ ಕೊಟ್ಟವರು ಯಾರು ಎಂದು ಪ್ರಶ್ನಿಸಿದರು. ದೇಶದ ಉಜ್ವಲ ಭವಿಷ್ಯಕ್ಕಾಗಿ ತಾವು ಪ್ರಧಾನಿ ಮೋದಿ ಅವರನ್ನು ಬೆಂಬಲಿಸುವುದು ತಮ್ಮ ಹಕ್ಕು ಎಂದು ಅವರು ಸಂದರ್ಶನದಲ್ಲಿ ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.