
ಬೆಂಗಳೂರು: ಅತ್ತ ರಾಜ್ಯ ರಾಜಕಾರಣಕ್ಕೆ ಮರಳುವ ಬಗ್ಗೆ ಅಷ್ಟೇನೂ ಆಸಕ್ತಿಯಿಲ್ಲದ ರಮ್ಯಾ ಅವರನ್ನು ಕರೆತರುವ ಪ್ರಯತ್ನವನ್ನು ರಾಜ್ಯ ನಾಯಕತ್ವ ಮಾಡುತ್ತಿದ್ದರೆ, ಇತ್ತ ಸಂಸದ ಪ್ರಕಾಶ್ ಹುಕ್ಕೇರಿಯವರು ಶತಾಯಗತಾಯ ರಾಜ್ಯ ರಾಜಕಾರಣಕ್ಕೆ ಮರಳಲು ತಮ್ಮೆಲ್ಲ ಸಾಮರ್ಥ್ಯ ಬಳಸುತ್ತಿದ್ದಾರೆ ಎಂದು ಮೂಲಗಳು ಹೇಳುತ್ತವೆ.
ಚಿಕ್ಕೋಡಿ-ಸದಲಗ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದ ಪ್ರಕಾಶ್ ಹುಕ್ಕೇರಿ ಅವರನ್ನು ಲೋಕಸಭೆಗೆ ನಿಲ್ಲುವಂತೆ ರಾಜ್ಯ ನಾಯಕತ್ವ ಮನವೊಲಿಸಿತ್ತು. ಹೀಗಾಗಿ, ತಮ್ಮ ಕ್ಷೇತ್ರ ಹುಕ್ಕೇರಿಯನ್ನು ಪುತ್ರ ಗಣೇಶ್ ಹುಕ್ಕೇರಿಗೆ ಬಿಟ್ಟುಕೊಟ್ಟು ಪ್ರಕಾಶ್ ಲೋಕಸಭೆಗೆ ಸ್ಪರ್ಧಿಸಿ ಗೆದ್ದಿದ್ದರು.
ಈಗ ಮತ್ತೆ ರಾಜ್ಯ ರಾಜಕಾರಣಕ್ಕೆ ಹಿಂತಿರುಗಲು ಅವರು ತೀವ್ರ ಪ್ರಯತ್ನ ನಡೆಸುತ್ತಿದ್ದಾರೆ. ಆದರೆ, ಇದಕ್ಕೆ ಇನ್ನೂ ಹೈಕಮಾಂಡ್ ಗ್ರೀನ್ ಸಿಗ್ನಲ್ ದೊರಕಿಲ್ಲ ಎನ್ನಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.