
ಬೆಂಗಳೂರು: 2014ರ ನಂತರ ದೇಶದಲ್ಲಿ ನಡೆದ ರೈತರ ಆತ್ಮಹತ್ಯೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ರಾಜಕೀಯ ನಾಯಕರೇ ಕಾರಣ ಎಂದು ನಟ ಪ್ರಕಾಶ್ ರೈ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬುಧವಾರ ನ್ಯಾಷನಲ್ ಕಾಲೇಜು ಮೈದಾನದಲ್ಲಿ ರೈತರ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ಇಂದು ದೇಶದ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಇದಕ್ಕೆ ಕೌಟುಂಬಿಕ ಹಾಗೂ ಅನಾರೋಗ್ಯ ಸಮಸ್ಯೆಯೇ ಕಾರಣ ಎನ್ನುತ್ತಾರೆ. ರೈತರದು ಆತ್ಮಹತ್ಯೆ ಅಲ್ಲ. ಅದು ಕೊಲೆ. ಈ ಕೊಲೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ರಾಜಕೀಯ ನಾಯಕರೇ ಕಾರಣ ಎಂದು ನಟ ಪ್ರಕಾಶ್ ರೈ ಕಿಡಿಕಾರಿದರು.
2014ರ ಲೋಕಸಭಾ ಚುನಾವಣೆ ವೇಳೆ ನರೇಂದ್ರ ಮೋದಿ ಅವರು ನಾನು ರೈತರೊಂದಿಗೆ ಇರುತ್ತೇನೆ ಎಂದು ಸಾಕಷ್ಟು ಭರವಸೆ ನೀಡಿದ್ದರು. ಅಧಿಕಾರ ಹಿಡಿದು ಮೂರೂವರೆ ವರ್ಷ ಕಳೆದರೂ ಯಾವ ಭರವಸೆಯನ್ನೂ ಈಡೇರಿಸಿಲ್ಲ. ಜನ ಪ್ರಶ್ನೆ ಕೇಳಿದರೆ ಕೇಂದ್ರ ಸರ್ಕಾರದವರು ರಾಜ್ಯ ಸರ್ಕಾರದತ್ತ, ರಾಜ್ಯ ಸರ್ಕಾರದವರು ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡಿ ತೋರಿಸುತ್ತಾರೆ.
ಪ್ರಶ್ನೆಗಳಿಗೆ ಉತ್ತರ ಕೊಡಿ ಎಂದರೆ ಮರು ಪ್ರಶ್ನೆ ಹಾಕುತ್ತಾರೆ. ಅಣ್ಣಾ ಹಜಾರೆ ಅವರು ಜೈಲಿಗೆ ಹೋಗಲು ಸಿದ್ಧರಿರಬೇಕು ಎಂದು ಹೇಳಿದ್ದಾರೆ. ಜೈಲಿಗೆ ಹೋಗುವುದರ ಜೊತೆಗೆ ಕೆಲವರನ್ನು ಜೈಲಿಗೆ ಕಳುಹಿಸಬೇಕು ಎಂದು ಅವರು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.