
ಬೆಂಗಳೂರು (ಏ. 03): ಶ್ರೀರಾಮ ಸೇನೆ ಶಿವಸೇನೆಯನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ಈ ಬಾರಿ ಚುನಾವಣೆಯಲ್ಲಿ ಶಿವಸೇನೆ ನೇತೃತ್ವದಲ್ಲಿ 60 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತೇವೆ ಎಂದು ಚಿಕ್ಕಮಗಳೂರಿನಲ್ಲಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಸಿದ್ದಲಿಂಗ ಸ್ವಾಮೀಜಿ ಜೇವರ್ಗಿ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ. ನಾನು ಶೃಂಗೇರಿ ಅಥವಾ ತೇರದಾಳ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ. ಈ ಬಗ್ಗೆ ಎರಡು ದಿನಗಳಲ್ಲಿ ಅಂತಿಮ ನಿರ್ಧಾರ ಮಾಡುತ್ತೇನೆ. ಹಿಂದುತ್ವ ನಮ್ಮ ಪ್ರಮುಖ ಅಜಂಡಾ.
ಬಿಜೆಪಿಯದ್ದು ಡೋಂಗಿ ಹಿಂದುತ್ವ. ಬಿಜೆಪಿ ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಹಿಂದುತ್ವವನ್ನು ಬಳಸಿಕೊಳ್ಳುತ್ತಿದೆ. ನಾವು ಹಿಂದುತ್ವಕ್ಕಾಗಿ ರಾಜಕೀಯ ಮಾಡುತ್ತೇವೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದ್ದರೂ ಭಾರತ ಗೋ ಮಾಂಸ ಸಾಗಾಟದಲ್ಲಿ ನಂಬರ್ 1 ಆಗಿದೆ. ಅನಂತ್ ಕುಮಾರ್ ಗೋ ಮಾಂಸ ನಿಷೇಧದ ಬಗ್ಗೆ ಡೋಂಗಿ ಮಾತನಾಡುತ್ತಾರೆ. ಗೋ ಮಾಂಸ ನಿಷೇಧ ಎನ್ನುವುದು ಬಿಜೆಪಿಯ ಬೂಟಾಟಿಕೆ ಎಂದು ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದತ್ತಪೀಠವೂ ಗೋ ಮಾಂಸ ನಿಷೇಧದ ಹಾಗೆ. ದತ್ತ ಪೀಠವನ್ನು ಸಹ ಬಿಜೆಪಿ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ. ಸಿಟಿ ರವಿ ಇದೇ ದತ್ತಪೀಠ ವಿವಾದದಿಂದ ಮೂರು ಬಾರಿ ಶಾಸಕರಾಗಿದ್ದಾರೆ. ದತ್ತಪೀಠ ಗುಹೆ ಕಟ್ಟಲಾಗದ ಸಿ ಟಿ ರವಿ 8 ಕೋಟಿ ಖರ್ಚು ಮಾಡಿ ತಮ್ಮ ಮನೆ ಕಟ್ಟಿಕೊಂಡಿದ್ದಾರೆ ಎಂದಿದ್ದಾರೆ.
ಮಾಲೀಕಯ್ಯ ಗುತ್ತೇದಾರ್ ಬಿಜೆಪಿ ಸೇರ್ಪಡೆಗೆ ಮುತಾಲಿಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನೂರಾರು ಮಸೀದಿಯನ್ನು ಕಟ್ಟಿದವನನ್ನು ಬಿಜೆಪಿಗೆ ಕರೆತಂದದ್ದು ಯಾಕೆ? ಮಾಲೀಕಯ್ಯ ಗುತ್ತೇದಾರ್’ರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಂಡು ಯಾರಿಗೆ ಪಾಠ ಹೇಳಲು ಹೊರಟಿದ್ದೀರಿ ಎಂದು ಪ್ರಶ್ನಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.