‘ರಕ್ತಚೆಲ್ಲಿಯಾದ್ರೂ ದತ್ತಪೀಠವನ್ನ ಹಿಂದೂ ಪೀಠವಾಗಿಸ್ತೇವೆ’

By Web Desk  |  First Published Oct 28, 2018, 2:13 PM IST

ದತ್ತಮಾಲಾ ಅಭಿಯಾನದ ಅಂತಿಮ ದಿನವಾದ ಇಂದು ಶೋಭಾಯಾತ್ರೆಗೆ ಮುತಾಲಿಕ್ ಚಾಲನೆ ನೀಡಿ ಮಾತನಾಡಿದ್ದು, ಅವರು ಏನೆಲ್ಲ ಮಾತನಾಡಿದ್ದಾರೆ ಎನ್ನುವುದು ಇಲ್ಲಿದೆ.


ಚಿಕ್ಕಮಗಳೂರು, [ಅ.28]: ರಕ್ತ ಚೆಲ್ಲಿಯಾದರೂ ದತ್ತಪೀಠವನ್ನ ಹಿಂದೂಗಳ ಪೀಠವಾಗಿಸಿ ಸರ್ಕಾರಕ್ಕೆ ಸ್ಪಷ್ಟಪಡಿಸುತ್ತೇವೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ನಗರದಲ್ಲಿ ಶ್ರೀರಾಮಸೇನೆ ನೇತೃತ್ವದಲ್ಲಿ ನಡೆಯುತ್ತಿರುವ ದತ್ತಮಾಲಾ ಅಭಿಯಾನದ ಅಂತಿಮ ದಿನವಾದ ಇಂದು ಶೋಭಾಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಮುತಾಲಿಕ್ , ರಾಜಕೀಯ ಮುಖಂಡರ ವಿಳಂಬ ನೀತಿಯ ವಿರುದ್ಧ ವಾಗ್ದಾಳಿ ನಡೆಸಿದರು.

Tap to resize

Latest Videos

ದತ್ತಪೀಠ ವಿವಾದವನ್ನು ಶಾಂತಿಯಿಂದಲೇ ಬಗೆಹರಿಸಬಹುದು. ಆದರೆ ವಿವಾದವನ್ನು ಜೀವಂತವಾಗಿರುವಂತೆ ರಾಜಕಾರಣಿಗಳು, ಬುದ್ಧಿಜೀವಿಗಳು ನೋಡಿಕೊಳ್ಳುತ್ತಿದ್ದಾರೆ.

 ಈ ಹಿಂದೆ ಮಾಜಿ ಪ್ರಧಾನಿ ದೇವೇಗೌಡ ಅವರು ಹುಬ್ಬಳ್ಳಿಯ ಈದ್ಗಾ ಮೈದಾನ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಿದ್ದರು. ಇಂದು ದೇವೇಗೌಡ ಅವರ ಪುತ್ರರಾದ ಎಚ್‍ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದಾರೆ. 

ತಂದೆಯಂತೆ ಇಂದು ದತ್ತಪೀಠ ವಿವಾದವನ್ನ ಬಗೆಹರಿಸಿ ಹಿಂದೂಗಳಿಗೆ ನೀಡಬೇಕೆಂದು ಎಂದು ಮನವಿ ಮಾಡಿದರು.

click me!