ಭರತ ಪುತ್ರನಿಗೆ ಭಾರತ ರತ್ನ: ಪ್ರಶಸ್ತಿ ಸ್ವೀಕರಿಸಿದ ಪ್ರಣಬ್!

Published : Aug 08, 2019, 07:06 PM IST
ಭರತ ಪುತ್ರನಿಗೆ ಭಾರತ ರತ್ನ: ಪ್ರಶಸ್ತಿ ಸ್ವೀಕರಿಸಿದ ಪ್ರಣಬ್!

ಸಾರಾಂಶ

ಮಾಜಿ ರಾಷ್ಟ್ರಪತಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ| ಪ್ರಣಬ್ ಮುಖರ್ಜಿಗೆ ಭಾರತ ರತ್ನ ಪ್ರಶಸ್ತಿ ಪ್ರದಾನ| ಪ್ರಣಬ್’ಗೆ ಭಾರತ ರತ್ನ ನೀಡಿ ಗೌರವಿಸಿದ ರಾಷ್ಟ್ರಪತರಿ ರಾಮನಾಥ್ ಕೋವಿಂದ್| ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಅದ್ದೂರಿ ಸಮಾರಂಭ| 

ನವದೆಹಲಿ(ಆ.08): ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನಕ್ಕೆ ಭಾಜನರಾಗಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಇಂದು ಪ್ರಶಸ್ತಿ ಪ್ರದಾನ ಮಾಡಲಾಯಿತು.

ರಾಷ್ಟ್ರ ರಾಜಧಾನಿ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮುಖರ್ಜಿ ಅವರಿಗೆ ಭಾರತ ರತ್ನ ಪ್ರಶಸ್ತಿ ಪ್ರಧಾನ ಮಾಡಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ ಬಾರಿಯ ಗಣರಾಜ್ಯೋತ್ಸವ ದಿನದಂದು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಖ್ಯಾತ ಗಾಯಕ ಬೂಪೇನ್ ಹಜಾರಿಕಾ ಹಾಗೂ ಜನಸಂಘದ ಸಂಸ್ಥಾಪಕ ಸದಸ್ಯ ನಾನಾಜಿ ದೇಶಮುಖ್ ಅವರಿಗೆ ಭಾರತ ರತ್ನ ಘೋಷಿಸಿತ್ತು.

ಭೂಪೇನ್ ಹಜಾರಿಕಾ ಪರವಾಗಿ ಅವರ ಪುತ್ರ ತೇಜ್ ಹಜಾರಿಕಾ ಭಾರತ ರತ್ನ ಪ್ರಶಸ್ತಿ ಸ್ವೀಕರಿಸಿದರು.

ಅದರಂತೆ ನಾನಾ ಜಿ ದೇಶಮುಖ್ ಪರವಾಗಿ ದೀನದಯಾಳ್ ಸಂಶೋಧನಾ ಸಂಸ್ಥೆಯ ಮುಖ್ಯಸ್ಥ ವಿರೇಂದ್ರಜೀತ್ ಸಿಂಗ್ ಭಾರತ ರತ್ನ ಪ್ರಶಸ್ತಿ ಸ್ವೀಕರಿಸಿದರು.

ಇನ್ನು ಪ್ರಣಬ್ ಮುಖರ್ಜಿ ಅವರಿಗೂ ಮೊದಲು ಭಾರತ ರತ್ನ ಪ್ರಶಶ್ತಿಗೆ ಭಾಜನರಾದ ಮಾಜಿ ರಾಷ್ಟ್ರಪತಿಗಳೆಂದರೆ, ಡಾ. ಎಸ್. ರಾಧಾಕೃಷ್ಣನ್, ಬಾಬು ರಾಜೇಂದ್ರ ಪ್ರಸಾದ್,  ಜಾಕೀರ್ ಹುಸೇನ್ ಹಾಗೂ ವಿವಿ ಗಿರಿ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
ಪೌರತ್ವ ಸಿಗುವ ಮುನ್ನವೇ ವೋಟರ್‌ ಲಿಸ್ಟ್‌ನಲ್ಲಿ ಹೆಸರು, ಸೋನಿಯಾ ಗಾಂಧಿಗೆ ನೋಟಿಸ್‌ ಕೊಟ್ಟ ದೆಹಲಿ ಕೋರ್ಟ್!