ಬಿಜೆಪಿ ಗೆಲುವಿನ ಹಿಂದಿರುವ ಪ್ರಶಾಂತ್ ಕಿಶೋರ್ ಈ ಬಾರಿ ಬಿಜೆಪಿಯಿಂದ ದೂರ

By Suvarna Web DeskFirst Published Feb 28, 2018, 8:07 AM IST
Highlights

2019ರ ಲೋಕಸಭಾ ಚುನಾವಣೆಗಾಗಿ ಬಿಜೆಪಿಯ ತಂತ್ರಗಾರಿಕೆ ರೂಪಿಸುವ ಹೊಣೆಯನ್ನು, ಚುನಾವಣಾ ತಂತ್ರಗಾರ ಪ್ರಶಾಂತ್‌ ಕಿಶೋರ್‌ ವಹಿಸಿಕೊಳ್ಳಲಿದ್ದಾರೆ ಎಂಬ ವರದಿಗಳನ್ನು ಅವರ ತಂಡದ ನಾಯಕರೊಬ್ಬರು ಅಲ್ಲಗಳೆದಿದ್ದಾರೆ.

ನವದೆಹಲಿ: 2019ರ ಲೋಕಸಭಾ ಚುನಾವಣೆಗಾಗಿ ಬಿಜೆಪಿಯ ತಂತ್ರಗಾರಿಕೆ ರೂಪಿಸುವ ಹೊಣೆಯನ್ನು, ಚುನಾವಣಾ ತಂತ್ರಗಾರ ಪ್ರಶಾಂತ್‌ ಕಿಶೋರ್‌ ವಹಿಸಿಕೊಳ್ಳಲಿದ್ದಾರೆ ಎಂಬ ವರದಿಗಳನ್ನು ಅವರ ತಂಡದ ನಾಯಕರೊಬ್ಬರು ಅಲ್ಲಗಳೆದಿದ್ದಾರೆ.

ಈ ಕುರಿತು ಮಾಧ್ಯವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಪ್ರಶಾಂತ್‌ ಕಿಶೋರ್‌ ನೇತೃತ್ವದ ಇಂಡಿಯನ್‌ ಪೊಲಿಟಿಕಲ್‌ ಆ್ಯಕ್ಷನ್‌ ಕಮಿಟಿ (ಐ- ಪ್ಯಾಕ್‌)ನ ಸದಸ್ಯರೊಬ್ಬರು, ‘ರಾಜಕೀಯ ನಾಯಕರೊಂದಿಗೆ ಪ್ರಶಾಂತ್‌ ಕಿಶೋರ್‌ ಭೇಟಿ ಹೊಸದೇನಲ್ಲ. ಇದಕ್ಕೆ ಕೆಲ ಬಿಜೆಪಿ ನಾಯಕರೊಂದಿಗಿನ ಭೇಟಿಯೂ ಹೊಸದಲ್ಲ. 2019ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿಯನ್ನು ಕಿಶೋರ್‌ ಸೇರುವ ಯಾವುದೇ ಸಾಧ್ಯತೆ ಇಲ್ಲ’ ಎಂದು ಹೇಳಿದ್ದಾರೆ.

2014ರ ಲೋಕಸಭಾ ಚುನಾವಣೆ ವೇಳೆ ಪ್ರಶಾಂತ್‌ ಅವರ ತಂಡವೇ ಬಿಜೆಪಿ ಪರವಾಗಿ ತಂತ್ರಗಾರಿಕೆ ರೂಪಿಸಿತ್ತು. ನಂತರದ ದಿನಗಳಲ್ಲಿ ಅವರು ಬಿಜೆಪಿ ಪಾಳಯದಿಂದ ದೂರವಾಗಿ ಕಾಂಗ್ರೆಸ್‌, ಜೆಡಿಯು, ವೈಎಸ್‌ಆರ್‌ ಕಾಂಗ್ರೆಸ್‌ ಪರವಾಗಿ ಕಾರ್ಯನಿರ್ವಹಿಸಿದ್ದರು.

click me!