
ಬಾಗಲಕೋಟೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯವನ್ನು ನಂಬರ್ ಒನ್ ಮಾಡಿದ್ದಾಗಿ ಹೇಳುತ್ತಿರುವುದು ಬೂಟಾಟಿಕೆ ಮಾತು ಎಂದು ಸಂಸದ ಪ್ರತಾಪ ಸಿಂಹ ಟೀಕಿಸಿದ್ದಾರೆ.
ಜಿಲ್ಲೆಯ ಜಮಖಂಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸುವ ಮೂಲಕ ಜನತೆ ಸೊಕ್ಕು ಅಡಗಿಸುವ ತೀರ್ಪು ನೀಡಿದ್ದಾರೆ. ಅವರಪ್ಪನಾಣೆಗೂ ಕುಮಾರಸ್ವಾಮಿ ಮುಖ್ಯಮಂತ್ರಿ ಆಗೋಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು. ಆದರೆ, ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟ ಮುನ್ನವೇ ಕುಮಾರಸ್ವಾಮಿ ಅವರಪ್ಪನ ಬಳಿ ಓಡಿಹೋಗಿ ನಿಮ್ಮ ಮಗನನ್ನೇ ಮುಖ್ಯಮಂತ್ರಿ ಮಾಡಿ, ಬೇಷರತ್ ಬೆಂಬಲ ಕೊಡ್ತೀವಿ ಅಂತ ಹೇಳಿದವರು ಯಾರು ಎಂದು ಪ್ರಶ್ನಿಸಿದರು.
ಲಿಂಗಾಯತ ಪ್ರತ್ಯೇಕ ಧರ್ಮ ಶಿಫಾರಸು ಡಿಕೆಶಿ ತಪ್ಪೊಪ್ಪಿಗೆ ಹೇಳಿಕೆ ವಿಚಾರ ಪ್ರಸ್ತಾಪಿಸಿ, ಉಪಚುನಾವಣೆಯಲ್ಲಿ ಡಿಕೆಶಿ ಸೋಲಿನ ಭಯದಿಂದ ತಪ್ಪೊಪ್ಪಿಕೊಳ್ಳುವ ನಾಟಕ ಮಾಡುತ್ತಿದ್ದಾರೆ.
ಕಳೆದ ಚುನಾವಣೆಯಲ್ಲಿ ಧರ್ಮ ವಿರೋಧಿ ಕೆಲಸ ಮಾಡಿದವರಿಗೆ ಜನ ಸರಿಯಾಗಿ ಪಾಠ ಕಲಿಸಿದ್ದಾರೆ. ಉಪಚುನಾವಣೆಯಲ್ಲೂ ಜನತೆ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.