
ಹಿಸಾರ್, ಹರ್ಯಾಣ (ಸೆ. 28) : ಮಾಜಿ ವಿಶ್ವ ಹಿಂದೂ ಪರಿಷತ್ ಮುಖಂಡ ಪ್ರವೀಣ್ ತೊಗಾಡಿಯಾ ಅವರು ನೂತನ ಪಕ್ಷವನ್ನು ಶೀಘ್ರವೇ ಆರಂಭ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.
ಹರ್ಯಾಣದ ಹಿಸಾರ್ ನಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಪ್ರವೀಣ್ ತೊಗಾಡಿಯಾ ಅವರು ಕಾಂಗ್ರೆಸ್ ಹಾಗೂ ಬಿಜೆಪಿಗೆ ಸವಾಲಾಗಿ ದೇಶದಲ್ಲಿ ನೂತನ ಪಕ್ಷ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.
ಇನ್ನು ಇದೇ ವೇಳೆ 2019ರ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆಯೂ ಮಾತನಾಡಿದ ಅವರು ಜನರ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲರಾದವರನ್ನು ಕ್ಷಮಿಸಬಹುದು. ಆದರೆ ಅವರ ಭಾವನೆಗಳೊಂದಿಗೆ ಆಟವಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಥವಾ ಕಾಂಗ್ರೆಸ್ ಯಾರೇ ಅಧಿಕಾರಕ್ಕೆ ಬಂದರೂ ಕೂಡ ನಮ್ಮದು ಅಧಿಕಾರವಿದ್ದೇ ಇರುತ್ತದೆ. ಹಿಂದುತ್ವಕ್ಕಾಗಿ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ತೊಗಾಡಿಯಾ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.