
ಮೈಸೂರು: ಮಾಜಿ ಸಚಿವ ರಾಮದಾಸ್ ಪ್ರಕರಣದಲ್ಲಿ ತಳುಕು ಹಾಕಿಕೊಂಡಿದ್ದ ಪ್ರೇಮಾಕುಮಾರಿ ಅವರು ಇಂಡಿಯನ್ ನ್ಯೂ ಕಾಂಗ್ರೆಸ್ ಪಕ್ಷದಿಂದ(ಐಎನ್‌ಸಿಪಿ) ಕೃಷ್ಣರಾಜ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದು, ಬುಧವಾರ ವಿವಿಧೆಡೆ ಪ್ರಚಾರ ನಡೆಸಿದರು.
ನಗರದ ನೂರೊಂದು ಗಣಪತಿ ದೇವಸ್ಥಾನದ ಬಳಿ ಪೂಜೆ ಸಲ್ಲಿಸಿದ ಬಳಿಕ ಸಾರ್ವಜನಿಕರಲ್ಲಿ ಈ ಬಾರಿ ತಮಗೆ ಬೆಂಬಲ ನೀಡುವಂತೆ ಕೋರಿದರು. ಐಎನ್‌ಸಿಪಿ ಚಿಹ್ನೆಯು ನೇಗಿಲು ಹೊತ್ತ ರೈತನ ಗುರುತಾಗಿದೆ. ನಾನು ಯಾರ ವಿರುದ್ಧವೂ ಸ್ಪರ್ಧಿಸುತ್ತಿಲ್ಲ.
ರಾಜಕೀಯ ಅವಕಾಶ ಬಯಸಿ ಸ್ಪರ್ಧಿಸುತ್ತಿದ್ದೇನೆ. ಕೆ.ಆರ್. ಕ್ಷೇತ್ರದ ಪ್ರಜ್ಞಾವಂತ ಮತದಾರರು ಸೂಕ್ತ ತೀರ್ಮಾನ ಕೈಗೊಂಡು, ನೊಂದ ಮಹಿಳೆಗೆ ಬೆಂಬಲ ನೀಡುತ್ತಾರೆ ಎಂಬ ಭರವಸೆ ಇದೆ ಎಂದು ಅವರು ತಿಳಿಸಿದರು. ರಾಮದಾಸ್ ಅವರು ಕೆ.ಆರ್. ಕ್ಷೇತ್ರದ ಮಾಜಿ ಶಾಸಕರಾಗಿದ್ದು, ಬಿಜೆಪಿ ಟಿಕೆಟ್ ನಿರೀಕ್ಷೆಯಲ್ಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.