
ಮೈಸೂರು (ನ.05): ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ತವರು ಕ್ಷೇತ್ರದಿಂದಲೇ ರಣ ಕಹಳೆ ಮೊಳಗಿಸಲು ಮುಂದಾಗಿರುವ ಜೆಡಿಎಸ್, ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರ ಕುಮಾರಪರ್ವ ಬೃಹತ್ ಸಮಾವೇಶಕ್ಕೆ ಭರ್ಜರಿ ಸಿದ್ಧತೆ ನಡೆಸಿದೆ.
ಇವತ್ತು ಜೆಡಿಎಸ್'ನ ನೂರಾರು ಕಾರ್ಯಕರ್ತರು ಬೈಕ್ ರ್ಯಾಲಿ ಮೂಲಕ ಕುಮಾರಪರ್ವ ಪ್ರಚಾರಕ್ಕೆ ಹೊರಟರು. ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧೆ ಮಾಡಬೇಕೆಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲೇ ನವೆಂಬರ್ 7 ರಂದು ಜೆಡಿಎಸ್ ಕುಮಾರಪರ್ವ ಸಮಾವೇಶ ಆಯೋಜಿಸಿ ಸಿಎಂಗೆ ಸವಾಲೊಡ್ಡಿದೆ. ಅಂದು ಬೆಳಿಗ್ಗೆ ಚಾಮುಂಡಿಬೆಟ್ಟದಲ್ಲಿ ಅಧಿದೇವತೆ ಚಾಮುಂಡೇಶ್ವರಿಗೆ ಕುಮಾರಸ್ವಾಮಿ ಪೂಜೆ ಸಲ್ಲಿಸಲಿದ್ದು, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಕುಮಾರಪರ್ವಕ್ಕೆ ವಿಧ್ಯುಕ್ತ ಚಾಲನೆ ನೀಡಲಿದ್ದಾರೆ. ಇದೇ ವೇಳೆ ಮಾತನಾಡಿದ ಶಾಸಕ ಜಿ.ಟಿ. ದೇವೇಗೌಡ ಹೋದಲ್ಲಿ ಬಂದಲ್ಲಿ ಮೋದಿಗೆ ನನ್ನ ಕಂಡರೆ ಭಯ ಎನ್ನುತ್ತಿರುವ ಸಿಎಂ ಸಿದ್ದರಾಮಯ್ಯ ಈಗ ಪ್ರಧಾನಿ ಕನಸು ಕಾಣುತ್ತಿದ್ದಾರೆ ಅಂತಾ ಟಾಂಗ್ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.