ಷಣ್ಮುಗನಾಥನ್‌ ರಾಜಿನಾಮೆ ಅಂಗೀಕರಿಸಿದ ರಾಷ್ಟ್ರಪತಿ

Published : Jan 27, 2017, 12:17 PM ISTUpdated : Apr 11, 2018, 12:47 PM IST
ಷಣ್ಮುಗನಾಥನ್‌ ರಾಜಿನಾಮೆ ಅಂಗೀಕರಿಸಿದ ರಾಷ್ಟ್ರಪತಿ

ಸಾರಾಂಶ

ರಾಜಭವನದ ಘನತೆಗೆ ಧಕ್ಕೆ ತರುವಂತೆ ರಾಜ್ಯಪಾಲರು ವರ್ತಿಸುತ್ತಿದ್ದಾರೆಂದು ಆರೋಪಿಸಿ ಅಲ್ಲಿನ ಸಿಬ್ಬಂದಿ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದರು. ವಿ.ಷಣ್ಮುಗನಾಥನ್‌ ನಿನ್ನೆ ರಾತ್ರಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.

ನವದೆಹಲಿ (ಜ.27): ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ ನೀಡುವ ಆರೋಪ ಹೊತ್ತಿದ್ದ ಮೇಘಾಲಯ ರಾಜ್ಯಪಾಲ ವಿ.ಷಣ್ಮುಗನಾಥನ್‌ ಅವರ ರಾಜಿನಾಮೆಯನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಂಗೀಕರಿಸಿದ್ದಾರೆ.

ರಾಜಭವನದ ಘನತೆಗೆ ಧಕ್ಕೆ ತರುವಂತೆ ರಾಜ್ಯಪಾಲರು ವರ್ತಿಸುತ್ತಿದ್ದಾರೆಂದು ಆರೋಪಿಸಿ ಅಲ್ಲಿನ ಸಿಬ್ಬಂದಿ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದರು. ವಿ.ಷಣ್ಮುಗನಾಥನ್‌ ನಿನ್ನೆ ರಾತ್ರಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.

ಪುರುಷ ಸಿಬ್ಬಂದಿಗಳನ್ನು ಎತ್ತಂಗಡಿ ಮಾಡಿ, ರಾಜಭವನವನ್ನು ‘ಲೇಡಿಸ್ ಕ್ಲಬ್’ ಆಗಿ ಪರಿವರ್ತಿಸಿದ್ದಾರೆ ಎಂದು ಸಿಬ್ಬಂದಿಗಳು ಪತ್ರದಲ್ಲಿ ಆರೋಪಿಸಿದ್ದರು.

ಆರೆಸ್ಸೆಸ್ ಹಿನ್ನೆಲೆಯುಳ್ಳ 67 ವರ್ಷದ ಷಣ್ಮುಗನಾಥನ್‌ ಅವರನ್ನು 2015ರಲ್ಲಿ ಎನ್​’ಡಿಎ ಸರ್ಕಾರವು  ಮೇಘಾಲಯದ ರಾಜ್ಯಪಾಲರನ್ನಾಗಿ ನೇಮಿಸಿತ್ತು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅನ್ಯ ಧರ್ಮಿಯ ಜೊತೆ ಮದುವೆ: ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ- ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ರಸಗೊಬ್ಬರ ಬಳಕೆ ಕಡಿಮೆ ಮಾಡಿ, ಮಣ್ಣಿನ ಆರೋಗ್ಯ ಕಾಪಾಡಿ: ಸಿಎಂ ಸಿದ್ದರಾಮಯ್ಯ ಸಲಹೆ