ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ರಂಜನ್ ಗೊಗೊಯಿ ನೇಮಕ

By Web DeskFirst Published Sep 13, 2018, 10:04 PM IST
Highlights

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯನ್ನ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇಮಕ ಮಾಡಿದ್ದಾರೆ. ನೂತನ ಮುಖ್ಯ ನ್ಯಾಯಮೂರ್ತಿಯಾಗಿ ರಂಜನ್ ಗೊಗೋಯಿ ಅವರನ್ನ ಅಧೀಕೃತವಾಗಿ ಆಯ್ಕೆ ಮಾಡಲಾಗಿದೆ.

ನವದೆಹಲಿ(ಸೆ.13): ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟೀಸ್ ರಂಜನ್ ಗೊಗೋಯಿ ನೇಮಕಗೊಂಡಿದ್ದಾರೆ. ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಗೊಗೋಯಿ ಅವರನ್ನ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆಯ್ಕೆ ಮಾಡಿದ್ದಾರೆ.

ಅಕ್ಟೋಬರ್ 2 ರಂದು ಹಾಲಿ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನಿವೃತ್ತರಾಗಲಿದ್ದಾರೆ. ದೀಪಕ್ ಮಿಶ್ರಾ ಮುಂದಿನ ಮುಖ್ಯ ನ್ಯಾಯ ಮೂರ್ತಿಯಾಗಿ ರಂಜನ್ ಗೊಗೋಯಿ ಅವರನ್ನ ಆಯ್ಕೆ ಮಾಡುವಂತೆ ಶಿಫಾರಸು ಮಾಡಿದ್ದರು.  ಹೀಗಾಗಿ ರಾಷ್ಟ್ರಪತಿ ಕೋವಿಂದ್ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಗೊಗೋಯಿ ಅವರನ್ನ ನೇಮಕ ಮಾಡಿದ್ದಾರೆ. 

ಅಕ್ಟೋಬರ್ 3ರಂದು ರಂಜನ್ ಗಗೋಯ್ ಮುಖ್ಯ ನ್ಯಾಯಮೂರ್ತಿಗಳಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. 2019ರ ನವೆಂಬರ್ 17 ರ ವರೆಗೆ ರಂಜನ್ ಗೊಗೋಯಿ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯ ಮೂರ್ತಿಯಾಗಿ ಅಧಿಕಾರ ನಿರ್ವಹಿಸಲಿದ್ದಾರೆ.

click me!