
ನವದೆಹಲಿ (ಡಿ.08): ಸಂಸತ್ತಿನ ಚಳಿಗಾಲ ಅಧಿವೇಶನದ ಕಲಾಪಗಳು ಸುಗಮವಾಗಿ ನಡೆಯದಿರುವುದಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸದನದಲ್ಲಿ ಚರ್ಚಿಸಬೇಕಾದ ವಿಚಾರಗಳು ಸಾಕಷ್ಟಿವೆ, ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು. ಈ ನಿಟ್ಟಿನಲ್ಲಿ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳು ಚಿಂತಿಸಬೇಕು ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿದ್ದಾರೆ.
ಅಧಿವೇಶನ ಆರಂಭವಾಗಿ 17 ದಿನಗಳು ಕಳೆದಿದ್ದರೂ, ಸಂಸತ್ತು ಕಲಾಪಗಳು ನಿರಂತರವಾಗಿ ಮುಂದೂಡಲ್ಪಡುತ್ತಿದೆ.
ಸರ್ಕಾರದ ನೋಟು ನಿಷೇಧ ಕ್ರಮದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಬಂದು ಸ್ಪಷ್ಟೀಕರಣ ನೀಡಬೇಕೆಂದು ಪ್ರತಿಪಕ್ಷಳು ಪಟ್ಟು ಹಿಡಿದಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.