ಸಂಕ್ರಾಂತಿಯ ಶುಭಾಶಯಗಳೊಂದಿಗೆ ಬಜೆಟ್ ಅಧಿವೇಶನ ಉದ್ದೇಶಿಸಿ ಭಾಷಣ ಆರಂಭಿಸಿದ ರಾಷ್ಟ್ರಪತಿ ಕೋವಿಂದ್

Published : Jan 29, 2018, 11:51 AM ISTUpdated : Apr 11, 2018, 01:10 PM IST
ಸಂಕ್ರಾಂತಿಯ ಶುಭಾಶಯಗಳೊಂದಿಗೆ ಬಜೆಟ್ ಅಧಿವೇಶನ ಉದ್ದೇಶಿಸಿ ಭಾಷಣ ಆರಂಭಿಸಿದ ರಾಷ್ಟ್ರಪತಿ ಕೋವಿಂದ್

ಸಾರಾಂಶ

ಸಂಕ್ರಾಂತಿಯ ಶುಭಾಶಯಗಳೊಂದಿಗೆ ಬಜೆಟ್ ಅಧಿವೇಶನ ಉದ್ದೇಶಿಸಿ ಭಾಷಣ ಆರಂಭಿಸಿದ ರಾಷ್ಟ್ರಪತಿ ಕೋವಿಂದ್

ನವದೆಹಲಿ : ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಿದ್ದು, ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ ಮಾಡಿದ್ದಾರೆ.

ಗಣರಾಜ್ಯೋತ್ಸವ ಹಾಗೂ ಸಂಕ್ರಾಂತಿ ಶುಭಾಶಯಗಳೊಂದಿಗೆ ಭಾಷಣ ಆರಂಭಿಸಿದ್ದಾರೆ. ದೇಶದ ಜನರ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಬಜೆಟ್ ಮಂಡನೆ ಮಾಡಲಾಗುತ್ತದೆ. ಈ ವರ್ಷದ ಬಜೆಟ್ ದೇಶದ ಆರ್ಥಿಕತೆಗೆ ಮತ್ತಷ್ಟು ಬಲವನ್ನು ನೀಡಲಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ.

ದೇಶದಲ್ಲಿ ಸಾಮಾಜಿಕ ನ್ಯಾಯ ಎನ್ನುವುದು ಮುಖ್ಯವಾದುದಾಗಿದೆ. ಶೌಚಾಲಯ ನಿರ್ಮಾಣವೂ ಕೂಡ ಸಾಮಾಜಿಕ ನ್ಯಾಯದ ಆಂದೋಲನವಾಗಿದೆ ಎಂದಿದ್ದಾರೆ. ಅಲ್ಲದೇ ಅಂಬೇಡ್ಕರ್ ಆಶಯಗಳ ಬಗ್ಗೆಯೂ ರಾಷ್ಟ್ರಪತಿ ಪ್ರಸ್ತಾಪಿಸಿದ್ದಾರೆ. ತ್ರಿವಳಿ ತಲಾಖ್ ಬಗ್ಗೆಯೂ ಕೂಡ  ಮಾತನಾಡಿದರು.  

ದೇಶದಲ್ಲಿ ಸೌದೆ ಉಪಯೋಗಿಸಿ ಅಡುಗೆ ಮಾಡುವ ಮಹಿಳೆಯರ ಕಷ್ಟದ ಬಗ್ಗೆ ಮಾತನಾಡಿ, ಈ ನಿಟ್ಟಿನಲ್ಲಿಯೇ ಪ್ರಧಾನಿ ಅವರು ಉಜ್ವಲ ಯೋಜನೆ ಜಾರಿ ಮಾಡಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೇ ವೇತನ ಸಹಿತ ಹೆರಿಗೆ ರಜೆಯ ಬಗ್ಗೆಯೂ ಕೂಡ  ರಾಷ್ಟ್ರಪತಿ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.  

ಬೇಟಿ ಬಚಾವೋ, ಬೇಟಿ ಪಡಾವೋ ಬಗ್ಗೆಯೂ ಕೂಡ ತಮ್ಮ ಮಾತುಗಳಲ್ಲಿ ರಾಷ್ಟ್ರಪತಿ ಉಲ್ಲೇಖಿಸಿದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರ ಸಾಕಷ್ಟು ಕ್ರಮ ಕೈಗೊಂಡಿದೆ. ಬಡತನದ ವಿರುದ್ಧ ಹೋರಾಡಲು ಅನೇಕ ಯೋಜನೆ ಜಾರಿ ತಂದಿಗೆ , ಸಾಲ ವಿತರಣೆ, ಜನ್’ಧನ್ ಯೋಜನೆಗಳನ್ನು ಜಾರಿ ಮಾಡಿದೆ ಎಂದಿದ್ದಾರೆ. ಅಲ್ಲದೇ ಕೃಷಿ ಕ್ಷೇತ್ರದ ಬಗ್ಗೆಯೂ ಕೂಡ ರಾಷ್ಟ್ರಪತಿ ಪ್ರಸ್ತಾಪಿಸಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನ, ದಾವಣಗೆರೆ ವ್ಯಾಪ್ತಿಯ ಶಾಲೆಗಳಿಗೆ ನಾಳೆ ರಜೆ
ಶಾಮನೂರು ಶಿವಶಂಕರಪ್ಪ ನಿಧನ: ಕಾಶಿ ಜಗದ್ಗುರು ಶ್ರೀಗಳ ಸಂತಾಪ,ವೀರಭದ್ರೇಶ್ವರ ಜಾತ್ರಾ ಮಹೋತ್ಸವ ರದ್ದು!