
ಮೈಸೂರು (ಅ. 10): ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಅ.10 ಮತ್ತು 11 ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅ.10ರಂದು ಜಯಚಾಮರಾಜ ಒಡೆಯರ್ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸುವರು.
KSRTC ಅಧಿಕಾರಿ ನೌಕರರ ಭತ್ಯೆ ಹೆಚ್ಚಳ!
ಅ.11ರಂದು ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಭೇಟಿ ನೀಡುವರು. ಮೈಸೂರಿನ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡುವರು. ನಂತರ ವರುಣ ಗ್ರಾಮದಲ್ಲಿ ಜೆಎಸ್‌ಎಸ್ ಸಂಸ್ಥೆಯ ಹೊಸ ಕ್ಯಾಂಪಸ್ ಶಂಕು ಸ್ಥಾಪನೆಯಲ್ಲಿ ಪಾಲ್ಗೊಳ್ಳುವರು. ರಾಷ್ಟ್ರಪತಿ ರಾಮನಾಥ ಕೊವಿಂದ್ ಅವರು ಅ.11ರ ಬೆಳಗ್ಗೆ 8.30ಕ್ಕೆ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಭೇಟಿ ನೀಡುವುದರಿಂದ ಅಂದು ಬೆಳಗ್ಗೆ 8.30 ರಿಂದ 10.30 ರವರೆಗೆ ಸಾರ್ವಜನಿಕರಿಗೆ ದೇವಾಲಯಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಶ್ರೀಕಂಠೇಶ್ವರ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.