
ನವದೆಹಲಿ(ಆ.20): ಶತಮಾನದ ಮಹಾಮಳೆಗೆ ತತ್ತರಿಸಿರುವ ಕೊಡಗಿನ ಜನರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಧೈರ್ಯ ತುಂಬಿದ್ದು, ಕನ್ನಡದಲ್ಲಿ ಟ್ವೀಟ್ ಮಾಡುವ ಮೂಲಕ ಕೊಡಗಿನ ಜನರ ಜೊತೆ ತಾವಿರುವುದಾಗಿ ತಿಳಿಸಿದ್ದಾರೆ.
ಕನ್ನಡದಲ್ಲಿ ಟ್ವೀಟ್ ಮಾಡಿರುವ ಕೋವಿಂದ್, ಈಗಾಗಲೇ ತಾವು ಕರ್ನಾಟಕದ ಮುಖ್ಯಮಂತ್ರಿಗಳು ಮತ್ತು ರಾಜ್ಯಪಾಲರ ಜೊತೆ ಮಾತನಾಡಿರುವುದಾಗಿ ತಿಳಿಸಿದ್ದಾರೆ. ಅಲ್ಲದೇ ಜಲಪ್ರಳಯಕ್ಕೆ ಎದೆಯೊಡ್ಡಿರುವ ಕೊಡಗು ಜನರ ಧೈರ್ಯವನ್ನು ರಾಷ್ಟ್ರಪತಿ ಕೊಂಡಾಡಿದ್ದಾರೆ.
ಸಂಕಷ್ಟದ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಇಡೀ ದೇಶ ಕೊಡಗು ಜನರೊಂದಿಗೆ ಇದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಡೆಸುತ್ತಿರುವ ಪರಿಹಾರ ಕಾರ್ಯಾಚರಣೆ ಕುರಿತು ಭರವಸೆ ವ್ಯಕ್ತಪಡಿಸಿದ್ದಾರೆ.
ವಿಪತ್ತು ನಿರ್ವಹಣಾ ಸಿಬ್ಬಂದಿ, ಸಾರ್ವಜನಿಕರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಿಬ್ಬಂದಿ ಚುರುಕಿನ ಕಾರ್ಯಾಚರಣೆಗೆ ರಾಷ್ಟ್ರಪತಿ ಕೋವಿಂದ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.