
ನವದೆಹಲಿ (ಜೂ.22): ಮಾಜಿ ಲೋಕಸಭಾ ಸ್ಪೀಕರ್ ಮೀರಾ ಕುಮಾರ್’ರವರು ಪ್ರತಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಧಿಕೃತವಾಗಿ ಘೋಷಿಸಿದ್ದಾರೆ. 17 ಪ್ರತಿಪಕ್ಷಗಳು ಇಂದು ಸಂಸತ್'ನಲ್ಲಿ ಸಮಾಲೋಚನೆ ನಡೆಸಿ ಮೀರಾ ಕುಮಾರ್'ರವರನ್ನು ರಾಷ್ಟ್ರಪತಿ ಅಭ್ಯರ್ಥಿಯಾಗಿ ಅವಿರೋಧವಾಗಿ ಆಯ್ಕೆ ಮಾಡಿದವು.
ಕಾಂಗ್ರೆಸ್ ಪಕ್ಷದಿಂದ ಸೋನಿಯಾ ಗಾಂಧಿ, ಮಾಜಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್, ಹಿರಿಯ ಮುಖಂಡ ಗುಲಾಂ ನಬಿ ಆಜಾದ್, ಮಲ್ಲಿಕಾರ್ಜುನ ಖರ್ಗೆ, ಅಹ್ಮದ್ ಪಟೇಲ್ ಎನ್ ಸಿಪಿಯಿಂದ ಶರದ್ ಪವಾರ್ ಮತ್ತು ಆರ್ ಜೆಡಿಯಿಂದ ಲಾಲು ಪ್ರಸಾದ್ ಯಾದವ್ ಸೇರಿದಂತೆ ಎಲ್ಲಾ ಪಕ್ಷದ ಪ್ರಮುಖರು ಸಭೆಯಲ್ಲಿ ಭಾಗಿಯಾಗಿದ್ದರು.
ಎನ್ ಡಿಎ ಅಭ್ಯರ್ಥಿ ರಾಮ್ ನಾಥ್ ಕೋವಿಂದಾರವರಿಗೆ ಜನತಾ ದಳ ಬೆಂಬಲ ನೀಡುವುದಾಗಿ ಈಗಾಗಲೇ ಹೇಳಿದೆ. ಕೋವಿಂದಾರವರು ದಲಿತ ಎನ್ನುವ ಕಾರಣ ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿರುವ ಎನ್ ಡಿಎಗೆ ಸ್ಪರ್ಧೆ ನೀಡಲು ಪ್ರತಿಪಕ್ಷಗಳು ಕೂಡಾ ದಲಿತ ಅಭ್ಯರ್ಥಿಯನ್ನೇ ಕಣಕ್ಕಿಳಿಸಿದೆ. ಜುಲೈ 17 ರಂದು ನಡೆಯುವ ರಾಷ್ಟ್ರಪತಿ ಚುನಾವಣೆ ಕುತೂಹಲ ಕೆರಳಿಸಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.