ವಿಧಾನಸೌಧ ವಜ್ರಮಹೋತ್ಸವ: ಜಂಟಿ ಅಧಿವೇಶನದಲ್ಲಿ ಕರುನಾಡನ್ನು ಹಾಡಿ ಹೊಗಳಿದ ರಾಷ್ಟ್ರಪತಿಗಳು

Published : Oct 25, 2017, 12:23 PM ISTUpdated : Apr 11, 2018, 12:45 PM IST
ವಿಧಾನಸೌಧ ವಜ್ರಮಹೋತ್ಸವ: ಜಂಟಿ ಅಧಿವೇಶನದಲ್ಲಿ ಕರುನಾಡನ್ನು ಹಾಡಿ ಹೊಗಳಿದ ರಾಷ್ಟ್ರಪತಿಗಳು

ಸಾರಾಂಶ

ವಿಧಾನಸೌಧದ ವಜ್ರ ಮಹೋತ್ಸವದ ಅಂಗವಾಗಿ ವಿಶೇಷ ವಿಧಾನಮಂಡಲ ಜಂಟಿ ಅಧಿವೇಶನ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ್ದು, ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಹಾಗೂ ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕ ಹಲವು ಮಹನೀಯರನ್ನು ದೇಶಕ್ಕೆ ನೀಡಿದೆ ಎಂದು ಮುಕ್ತಕಂಠದಿಂದ ಕರುನಾಡನ್ನು ಶ್ಲಾಘಿಸಿದ್ದಾರೆ. ಈ ಮೂಲಕ ಎಲ್ಲರ ಪ್ರೀತಿಗೆ ಪಾತ್ರರಾದರು.

ಬೆಂಗಳೂರು(ಅ.25): ವಿಧಾನಸೌಧದ ವಜ್ರ ಮಹೋತ್ಸವದ ಅಂಗವಾಗಿ ವಿಶೇಷ ವಿಧಾನಮಂಡಲ ಜಂಟಿ ಅಧಿವೇಶನ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ್ದು, ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಹಾಗೂ ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕ ಹಲವು ಮಹನೀಯರನ್ನು ದೇಶಕ್ಕೆ ನೀಡಿದೆ ಎಂದು ಮುಕ್ತಕಂಠದಿಂದ ಕರುನಾಡನ್ನು ಶ್ಲಾಘಿಸಿದ್ದಾರೆ. ಈ ಮೂಲಕ ಎಲ್ಲರ ಪ್ರೀತಿಗೆ ಪಾತ್ರರಾದರು.

ಆಂಗ್ಲ ಭಾಷೆಯಲ್ಲಿ ಭಾಷಣ ಮಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನೆನಪಿನಲ್ಲಿ ಉಳಿಯುವ ದಿನ, ರಾಷ್ಟ್ರಪತಿಯಾದ ಬಳಿಕ ವಿಧಾನಸೌಧದ ವಜ್ರ ಮಹೋತ್ಸವ ಆಚರಣೆಯಲ್ಲಿ ಭಾಷಣ ಮಾಡುತ್ತಿರುವುದು ಸಂತಸ ತಂದಿದೆ ಎಂದರು. ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಕರ್ನಾಟಕಕ್ಕೆ ಬಂದಿದ್ದೇನೆ. ಐತಿಹಾಸಿಕ ಸನ್ಇವೇಶದಲ್ಲಿ ಭಾಷಣ ಮಾಡುತ್ತಿರುವುದು ನನಗೆ ಬಹಳಷ್ಟು ಖುಷಿ ನೀಡಿದೆ, ಜನರ ಕನಸನ್ನು ನನಸು ಮಾಡಲು ಈ ಸೌಧ ನೆರವಾಗಿದೆ ಎಂದಿದ್ದಾರೆ.

ಕರ್ನಾಟಕ ಮಹಾನ್ ವೀರರ ಭೂಮಿ ಎಂದು ಉಲ್ಲೇಖಿಸಿದ ರಾಷ್ಟ್ರಪತಿಗಳು ನಾಡಪ್ರಭು ಕೆಂಪೇಗೌಡ, ಕಿತ್ತೂರು ರಾಣಿ ಚೆನ್ನಮ್ಮ, ವಿಜಯನಗರ ಸಾಮ್ರಾಜ್ಯ ವನ್ನು ಸ್ಮರಿಸಿಕೊಂಡ ರಾಷ್ಟ್ರಪತಿಗಳು. ವಿಧಾನಸೌಧ ಕರ್ನಾಟಕದ ಹೆಗ್ಗುರುತು, ಕರ್ನಾಟಕಕ್ಕೆ ಜ್ಞಾನಾರ್ಜನೆ ಮತ್ತು ಉದ್ಯೋಗಕ್ಕಾಗಿ ಜನರು ಬರ್ತಾರೆ, ಕರ್ನಾಟಕದ ಕನಸೇ ಭಾರತದ ಕನಸು, ಉಜ್ವಲ ಕರ್ನಾಟಕದ ಭವಿಷ್ಯಕ್ಕಾಗಿ ನಾವು ಶ್ರಮಿಸೋಣ ಎಂದು ಕರುನಾಡನ್ನು ಹೊಗಳಿ, ರಾಜ್ಯದ ಇತಿಹಾಸವನ್ನು ಸಂಕ್ಷಿಪ್ತವಾಗಿ ಭಾಷಣದಲ್ಲಿ ತಿಳಿಸಿದರು.

ವಜ್ರಮಹೋತ್ಸವದಲ್ಲಿ ಪಾಲ್ಗೊಳ್ಳುವ ಸಲುವಾಗಿ ಮಂಗಳವಾರವೇ ರಾಮನಾಥ್ ಕೋವಿಂದ್ ಅವರು ಬೆಂಗಳೂರಿಗೆ ಆಗಮಿಸಿದ್ದರು. ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಬಳಿಕ ರಾಜಭವನದಲ್ಲಿ ವಾಸ್ತವ್ಯ ಹೂಡಿದ್ದರು. ಬುಧವಾರ ರಾಜ್ಯಪಾಲ ವಜುಭಾಯಿ ಅವರು ರಾಷ್ಟ್ರಪತಿಗಳನ್ನು ವಿಧಾನಸೌಧಕ್ಕೆ ಕರೆತಂದರು. ಭಾಷಣದ ಬಳಿಕ ರಾಷ್ಟ್ರಪತಿಗಳು ವಿಧಾನ ಪರಿಷತ್ ಸಭಾಂಗಣ ವೀಕ್ಷಣೆ ಮಾಡಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕನ್ನಡದಲ್ಲೂ ರೈಲ್ವೆ ಪರೀಕ್ಷೆ ನಡೆಸಲು ಪ್ರಧಾನಿ ಮೋದಿ ಅಸ್ತು: ಸೋಮಣ್ಣ
ಬಿಜೆಪಿ ಶಾಸಕ ಬೈರತಿ ವಿರುದ್ಧ ಲುಕ್‌ ಔಟ್‌ ನೋಟಿಸ್‌ ಜಾರಿ?