
ಲಂಡನ್: ಬ್ರಿಟಿಷ್ ರಾಜಮನೆತನದ ರಾಜಕುಮಾರ ಹ್ಯಾರಿ ಮತ್ತು ಅವರ ಪತ್ನಿ ಮೇಘನ್ ಮಾರ್ಕೆಲ್ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.
ಇದೇ ವರ್ಷದ ಮೇ ತಿಂಗಳಲ್ಲಿ ವಿಂಡ್ಸರ್ ಕ್ಯಾಸ್ಟಲ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಮೇಘನ್ ಗರ್ಭವತಿಯಾಗಿದ್ದು, ಮುಂದಿನ ವರ್ಷದ ಮೊದಲಾರ್ಧದಲ್ಲಿ ಮಗುವಿಗೆ ಜನ್ಮ ನೀಡುವ ಸಾಧ್ಯತೆಯಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನೇ ಹೊರಡಿಸಿರುವ ಕೆನ್ಸಿಂಗ್ಟನ್ ಅರಮನೆ, ‘ಹ್ಯಾರಿ- ಮೇಘನ್ ದಂಪತಿಗೆ ಭಾರೀ ಬೆಂಬಲ ನೀಡಿರುವ ನಿಮ್ಮೆಲ್ಲರಿಗೂ ಮೇಘನ್ ಅವರು, ಮಗುವಿಗೆ ಜನ್ಮ ನೀಡಲಿದ್ದಾರೆ ಎಂಬ ಖುಷಿ ವಿಚಾರ ತಿಳಿ ಸಲು ಇಚ್ಚಿಸುತ್ತೇವೆ,’ ಎಂದು ತಿಳಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ