
ಮೈಸೂರು (ಜೂ. 25): ನಂಜನಗೂಡಿನ ಹೆಡತಲೆ ಕುರಟ್ಟಿ ಮಾರ್ಗವಾಗಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಖಾಸಗಿ ವಾಹನ ಪಲ್ಟಿಯಾಗಿ ವಾಹನ ಚಾಲಕ ಕಾಂತರಾಜು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹೆಮ್ಮರಗಾಲ ಗ್ರಾಮದ ಗುರುಕುಲ ಖಾಸಗಿ ಶಾಲೆಯಲ್ಲಿ ಮಕ್ಕಳು ಕಲಿಯುತ್ತಿದ್ದರು. ಕುರಹಟ್ಟಿ ಗ್ರಾಮದಿಂದ ಮಕ್ಕಳನ್ನು ಹತ್ತಿಸಿಕೊಂಡು ಹೆಡತಲೆ ಮಾರ್ಗವಾಗಿ ಹೆಮ್ಮರಗಾಲ ಖಾಸಗಿ ಶಾಲೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಖಾಸಗಿ ವಾಹನದಲ್ಲಿದ್ದ 20 ಮಕ್ಕಳಲ್ಲಿ ಸುಮಾರು 12 ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡಿರುವ ಮಕ್ಕಳನ್ನು ನಂಜನಗೂಡಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದ ವರ್ಷವೂ ಇದೇ ತಿಂಗಳಿನಲ್ಲಿ ನಂಜನಗೂಡು ತಾಲೂಕಿನ ಮುದ್ದಹಳ್ಳಿ ಗ್ರಾಮದ ಬಳಿ ಖಾಸಗಿ ಶಾಲಾ ವಾಹನ ಅಪಘಾತಕ್ಕೀಡಾಗಿತ್ತು . ಹಲವಾರು ಮಕ್ಕಳು ಗಂಭೀರ ಗಾಯಗೊಂಡಿದ್ದರು. ಸ್ಥಳಕ್ಕೆ ನಂಜನಗೂಡಿನ ಬಿಇಓ ನಾರಾಯಣ, ಮಹೇಶ್ ಅಪಘಾತ ನಡೆದ ಸ್ಥಳಕ್ಕೆ ದೌಡಾಯಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.